

ಭೀಮಾ ನದಿಗೆ ಪ್ರವಾಹ: 8 ಜನರ ರಕ್ಷಣೆ
ರುದ್ರಪ್ಪ ಆಸಂಗಿ ಸಪ್ತಸಾಗರ ವಾರ್ತೆ ವಿಜಯಪುರ, ಸೆ. 27:ಕಳೆದ ಮೂರು ದಿನಗಳಿಂದ ವಿಜಯಪುರ ಜಿಲ್ಲೆಯಲ್ಲಿ ಸತತವಾಗಿ ಧಾರಾಕಾರ ಮಳೆ ಸುರಿಯುತ್ತಿದ್ದು, ಭೀಮಾ ನದಿಗೆ ಪ್ರವಾಹ ಬಂದು ಜನಜೀವನ ಅಸ್ತವ್ಯಸ್ತವಾಗಿದೆ. ತೋಟದ ಜಮೀನಿನಲ್ಲಿ ನೀರು ಸುತ್ತುವರಿದ ಪರಿಣಾಮ ಮಧ್ಯೆದಲ್ಲಿ ಸಿಲುಕಿಕೊಂಡಿದ್ದ ಎಂಟು ಜನರನ್ನು ರಕ್ಷಿಸಲಾಗಿದೆ.ಜಿಲ್ಲೆಯ ಆಲಮೇಲ ತಾಲೂಕಿನ ತಾವರಖೇಡ ಗ್ರಾಮದಲ್ಲಿ ಪ್ರವಾಹ ಉಂಟಾಗಿ ನದಿ ದಂಡೆ ಜಮೀನುಗಳಿಗೆ ನೀರು ನುಗ್ಗಿದೆ. ನೋಡು ನೋಡುತ್ತಿದ್ದಂತೆಯೇತೋಟದ ಮನೆ ಸುತ್ತಮುತ್ತಲಿನ ಪ್ರದೇಶದಲ್ಲಿ ನೀರು ನುಗ್ಗಿ ಸಿಲುಕಿದ್ದ 8 ಜನರನ್ನು ಬೋಟ್ ಬಳಸಿ ರಕ್ಷಣೆ…

ಹವಾಮಾನ ಇಲಾಖೆ ಮುನ್ಸೂಚನೆ: ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಲು ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ
ಸಪ್ತ ಸಾಗರ ವಾರ್ತೆ ವಿಜಯಪುರ, ಸೆ. 26: ಜಿಲ್ಲೆಯಲ್ಲಿ ಸೆ.26 ರಿಂದ 28ರವರೆಗೆ ಬಿರುಗಾಳಿಯೊಂದಿಗೆ ಭಾರಿ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹಾಗೂ ಸೆ.29 ರಿಂದ ಅ.03ರವರೆಗೆ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಕುರಿತು ಹವಾಮಾನ ಇಲಾಖೆ ಹಾಗೂ ಕೆಎಸ್‍ಎನ್‍ಡಿಎಂಸಿ ಮುನ್ಸೂಚನೆಗಳನ್ನು ನೀಡಿದ್ದು, ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ರಕ್ಷಣೆ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸನ್ನದ್ಧರಾಗಿರಲು ಮತ್ತು ರಜೆ ಮೇಲೆ ತೆರಳಲು-ಕೇಂದ್ರ ಸ್ಥಾನ ಬಿಡುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರಿಯವರ ಪೂರ್ವಾನುಮತಿ ಪಡೆಯುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ….

ಪ್ರತಿ ಕ್ವಿಂಟಲ್ ಗೆ 7221 ರೂ. ಬೆಂಬಲ ಬೆಲೆಯಡಿ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಆರಂಭಿಸಲು ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ
ಸಪ್ತಸಾಗರ ವಾರ್ತೆ ವಿಜಯಪುರ, ಸೆ. 26: ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರವು ಬೆಂಬಲ ಬೆಲೆ ಘೋಷಿಸಿರುವ ಎಫ್‍ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಉತ್ಪನ್ನವನ್ನು ಪ್ರತಿ ಕ್ವಿಂಟಲ್‍ಗೆ 7721 ರೂ. ಬೆಂಬಲೆ ಬೆಲೆಯಡಿ ಖರೀದಿಗೆ ರೈತರ ನೋಂದಣಿಯನ್ನು 80 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆ ನಿಗದಿಪಡಿಸಿ ನೋಂದಣಿ ಕಾರ್ಯದ ಜೊತೆಗೆ ಖರೀದಿ ಪ್ರಕ್ರಿಯೆ ಪ್ರಾರಂಭಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಕನಿಷ್ಠ ಬೆಂಬಲ ಬೆಲೆ ಕಾರ್ಯಪಡೆ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.ಸೆ.26ರಂದು ನಡೆದ ಕನಿಷ್ಠ ಬೆಂಬಲ ಬೆಲೆ ಕಾರ್ಯಪಡೆ ಸಮಿತಿ ಸಭೆಯಲ್ಲಿ…

ವಿಶ್ವ ಪ್ರವಾಸೋದ್ಯಮ ದಿನಾಚರಣೆ: ಚಿತ್ರಕಲಾ ಶಿಬಿರಕ್ಕೆ ಚಾಲನೆ
ಸಪ್ತಸಾಗರ ವಾರ್ತೆ ವಿಜಯಪುರ, ಸೆ. 26: ನಾವು ಆದಿಕಾಲದಲ್ಲಿ ಗಿಡ ಮರಗಳ ಅಡಿಯಲ್ಲಿ ವಿವಿಧ ಪ್ರಕಾರಗಳ ವೈವಿದ್ಯಮಯ ಆಟ ಪಾಠ, ವಿದ್ಯಾಭ್ಯಾಸದ ಜೊತೆಗೆ ಇತರ ಚಟುವಟಿಕೆಗಳಲ್ಲಿ ಭಾಗವಹಿಸಿ ಸಂತೋಷವನ್ನು ಹಂಚಿಕೊಳ್ಳುವ ಪ್ರಸಂಗ ಇಂದು ಮರಳಿ ನೆನಪಿಸುವಂತಾಗಿದೆ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ಧಾರವಾಡ ವೃತ್ತದ ಅಧೀಕ್ಷಕ ಪುರಾತತ್ವವೀಧರ ರಮೇಶ ಮೂಲಿಮನಿ ಹೇಳಿದರು.ಶುಕ್ರವಾರ ನಗರದ ಗೋಳಗುಮ್ಮಟ ಆವರಣದಲ್ಲಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಜೈನ್ ವಿಶ್ವವಿದ್ಯಾಲಯ ಬೆಂಗಳೂರು, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ, ಪ್ರವಾಸೋದ್ಯಮ ಮಂತ್ರಾಲಯ ಬೆಂಗಳೂರು ಹಾಗೂ…

ಶಿಸ್ತು, ಸಮರ್ಪಣೆಯಿಂದ ಸಾಧನೆ ಸಾಧ್ಯ-ಡಾ.ಶಿವಕುಮಾರ
ಸಪ್ತಸಾಗರ ವಾರ್ತೆ ವಿಜಯಪುರ, ಸೆ. 26 :ಶೈಕ್ಷಣಿಕ ಜೀವನದಲ್ಲಿ ಶಿಸ್ತು, ಸಮರ್ಪಣೆ ಮತ್ತು ನಾವೀನ್ಯತೆ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮುಖ್ಯ ಪಾತ್ರ ವಹಿಸುತ್ತವೆ ಎಂದು ಶ್ರೀಶರಣಬಸವೇಶ್ವರ ಫಾರ್ಮಸಿ ಕಾಲೇಜಿನ ಪ್ರಾಚಾರ್ಯ ಡಾ.ಎಚ್. ಶಿವಕುಮಾರ ಕಿವಿಮಾತು ಹೇಳಿದರು.ನಗರದ ಶ್ರೀ ಶರಣಬಸವೇಶ್ವರ ಫಾರ್ಮಸಿ ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷಾರಂಭದ ವರ್ಷದ ಬಿ.ಫಾರ್ಮಸಿ ಮತ್ತು ಡಿ.ಫಾರ್ಮಸಿ ವಿದ್ಯಾರ್ಥಿಗಳ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಯಾವುದೇ ಶಿಕ್ಷಣ ಸಂಸ್ಥೆ ತಮ್ಮಲ್ಲಿ ಓದಲು ಬರುವ ಮಕ್ಕಳ ಉಜ್ವಲ ಭವಿಷ್ಯಕ್ಕೆ ಅಗತ್ಯ ಇರುವ…

ಶಿಸ್ತು, ಸಮರ್ಪಣೆಯಿಂದ ಸಾಧನೆ ಸಾಧ್ಯ-ಡಾ.ಶಿವಕುಮಾರ
ಸಪ್ತಸಾಗರ ವಾರ್ತೆ ವಿಜಯಪುರ, ಸೆ. 26 :ಶೈಕ್ಷಣಿಕ ಜೀವನದಲ್ಲಿ ಶಿಸ್ತು, ಸಮರ್ಪಣೆ ಮತ್ತು ನಾವೀನ್ಯತೆ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮುಖ್ಯ ಪಾತ್ರ ವಹಿಸುತ್ತವೆ ಎಂದು ಶ್ರೀಶರಣಬಸವೇಶ್ವರ ಫಾರ್ಮಸಿ ಕಾಲೇಜಿನ ಪ್ರಾಚಾರ್ಯ ಡಾ.ಎಚ್. ಶಿವಕುಮಾರ ಕಿವಿಮಾತು ಹೇಳಿದರು.ನಗರದ ಶ್ರೀ ಶರಣಬಸವೇಶ್ವರ ಫಾರ್ಮಸಿ ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷಾರಂಭದ ವರ್ಷದ ಬಿ.ಫಾರ್ಮಸಿ ಮತ್ತು ಡಿ.ಫಾರ್ಮಸಿ ವಿದ್ಯಾರ್ಥಿಗಳ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಯಾವುದೇ ಶಿಕ್ಷಣ ಸಂಸ್ಥೆ ತಮ್ಮಲ್ಲಿ ಓದಲು ಬರುವ ಮಕ್ಕಳ ಉಜ್ವಲ ಭವಿಷ್ಯಕ್ಕೆ ಅಗತ್ಯ ಇರುವ…

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್
ಸಪ್ತಸಾಗರ ವಾರ್ತೆ ಬೆಂಗಳೂರು, ಸೆ. 26: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದರು.ಸಮೀಕ್ಷೆ ಕಾರ್ಯ ರಾಜ್ಯಾದ್ಯಂತ ಆರಂಭವಾಗಿದ್ದು, ಆರಂಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳ ಕಾರಣ ಸಮೀಕ್ಷೆ ನಿಧಾನವಾಗಿತ್ತು. ಈಗ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಇಂದಿನಿಂದ ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.ಸಮೀಕ್ಷೆ ಕಾರ್ಯಕ್ಕೆ ಯಾವುದೇ ತಾಂತ್ರಿಕ ತೊಂದರೆಗಳು ಉಂಟಾಗದಂತೆ ಎಚ್ಚರಿಕೆ…

ಸೆ.27ರಂದು ವಿಶ್ವ ಪ್ರವಾಸೋದ್ಯಮ ದಿನಾಚರಣೆ
ಸಪ್ತಸಾಗರ ವಾರ್ತೆ ವಿಜಯಪುರ, ಸೆ. 25: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸೆ. 27ರ ಬೆಳಿಗ್ಗೆ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮವನ್ನು ನಗರದ ಶಿವಗಿರಿಯಲ್ಲಿ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಉದ್ಘಾಟಿಸಲಿದ್ದಾರೆ. ಕಾನೂನು, ನ್ಯಾಯ, ಮಾನವ ಹಕ್ಕುಗಳು ಹಾಗೂ ಸಂಸದೀಯ ವ್ಯವಹಾರಗಳು, ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಹಾಗೂ ಜವಳಿ, ಕಬ್ಬು ಅಭಿವೃದ್ಧಿ ಮತ್ತು…
ಸೆ. 26 ರಂದು ವಿಜಯಪುರ ಜಿಲ್ಲಾ ಮಾಧ್ಯಮ ಪ್ರತಿನಿಧಿಗಳಿಗೆ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ‘ವಾರ್ತಾಲಾಪ.
ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 25: ಭಾರತ ಸರ್ಕಾರದ ವಾರ್ತಾ ಶಾಖೆ (ಪಿಐಬಿ) ಬೆಂಗಳೂರು ಹಾಗೂ ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ (ಎನ್‌ಟಿಪಿಸಿ) ಕೂಡಗಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ), ಕರ್ನಾಟಕ ಕಾರ್ಯನಿರತ ಸಂಪಾದಕರ ಸಂಘ (ರಿ), ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ) ಮತ್ತು ಕರ್ನಾಟಕ ಸಂಪಾದಕಿಯರ ಸಂಘ (ರಿ), ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ಸೆ. 26ರಂದು ವಿಜಯಪುರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ…

ಸರ್ಕಾರಿ ವೈದ್ಯಕೀಯ ಕಾಲೇಜ್ ಗೆ ಆಗ್ರಹಿಸಿ 8ನೇ ದಿನದಲ್ಲಿ ಮುಂದುವರೆದ ಧರಣಿ ಸತ್ಯಾಗ್ರಹ
ಸಪ್ತ ಸಾಗರ ವಾರ್ತೆ ವಿಜಯಪುರ, ಸೆ. 25:ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪಿಸಬೇಕೆಂದು ಆಗ್ರಹಿಸಿ ಕಳೆದ ಎಂಟು ದಿನಗಳಿಂದ ಕೈಗೊಂಡ ಧರಣಿ ಸತ್ಯಾಗ್ರಹ ಗುರುವಾರ 8ನೇ ದಿನಕ್ಕೆ ಕಾಲಿಟ್ಟಿದ್ದು, ವಿವಿಧ ಸಂಘಟನೆಗಳು ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿವೆ.ಏತನ್ಮಧ್ಯೆ ಸತ್ಯಾಗ್ರಹ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಆನಂದ್ ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಭೇಟಿ ನೀಡಿ, ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆಯಂತೆ ಸತ್ಯಾಗ್ರಹ ಹಿಂತೆಗೆದುಕೊಳ್ಳಲು ಮನವಿ ಮಾಡಲಾಯಿತು. ಆದರೆ ಹೋರಾಟಗಾರರು ವಿಜಯಪುರ ಜಿಲ್ಲೆಗೆ ಘೋಷಣೆ ಮಾಡಿದ ಪಿಪಿಪಿ ಮಾದರಿ ವೈದ್ಯಕೀಯ…