ಕಬ್ಬು ಬೆಳೆಗಾರರ ಸಮಸ್ಯೆ ತೀವ್ರ ಸ್ವರೂಪ: ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಪಂಚಪ್ಪ ಕಲಬುರಗಿ ಆಗ್ರಹ
ಹಿಂಗಾರು ಬೆಳೆಗಳಿಗೆ ನೀರು ನಿರಾಕರಿಸುವ ಐಸಿಸಿ ನಿರ್ಣಯ ಹಿಂಪಡೆಯಲು ಒತ್ತಾಯ ಸಪ್ತಸಾಗರ ವಾರ್ತೆ, ವಿಜಯಪುರ, ಅ. 17:ಕಬ್ಬು ಬೆಳೆಗಾರರ ಸಮಸ್ಯೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರೈತರ ಹಿತದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರು ತಕ್ಷಣ ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ರೈತ ಮುಖಂಡ ಪಂಚಪ್ಪ ಕಲಬುರಗಿ ಒತ್ತಾಯಿಸಿದರು.ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಒಂಬತ್ತು ವರ್ಷಗಳಿಂದ ಕಬ್ಬಿನ ಕನಿಷ್ಠ ಬೆಂಬಲ ಬೆಲೆ ಪರಿಷ್ಕರಣೆಯಾಗಿಲ್ಲ. ಇದೇ ಅವಧಿಯಲ್ಲಿ ಕೃಷಿ ಕಾರ್ಮಿಕರ…
ವಿಜಯಪುರದಲ್ಲಿ ಅಸ್ಮಿತಾ ಖೇಲೋ ಇಂಡಿಯಾ ರಾಜ್ಯಮಟ್ಟದ ಸೈಕ್ಲಿಂಗ್ ಟೂರ್ನಿಗೆ ಚಾಲನೆ
ಸೈಕ್ಲಿಂಗ್ ಅಸೋಸಿಯೇಷನ್ಗೆ ಎರಡು ಸೈಕಲ್ ಕೊಡಿಸುವುದಾಗಿ ಸಂಸದ ರಮೇಶ ಜಿಗಜಿಣಗಿ ಭರವಸೆ ಸಪ್ತಸಾಗರ ವಾರ್ತೆ, ವಿಜಯಪುರ, ಅ. 17:ಜಿಲ್ಲೆಯ ಸೈಕ್ಲಿಸ್ಟ್ಗಳು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಲು ಉತ್ತೇಜನ ನೀಡುವ ಉದ್ದೇಶದಿಂದ ಕರ್ನಾಟಕ ರಾಜ್ಯ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಷನ್ಗೆ ಎರಡು ಸೈಕಲ್ಗಳನ್ನು ಕೊಡಿಸುವುದಾಗಿ ಸಂಸದ ರಮೇಶ ಜಿಗಜಿಣಗಿ ಭರವಸೆ ನೀಡಿದರು.ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆ ಬಳಿಯ ವೆಲೋಡ್ರೋಮ್ನಲ್ಲಿ ಶನಿವಾರ ಆರಂಭವಾದ ಅಸ್ಮಿತಾ ಖೇಲೋ ಇಂಡಿಯಾ ರಾಜ್ಯಮಟ್ಟದ ಮಹಿಳಾ ಟ್ರ್ಯಾಕ್ ಸೈಕ್ಲಿಂಗ್ ಟೂರ್ನಿಗೆ ಚಾಲನೆ ನೀಡಿ ಅವರು ಮಾತನಾಡಿದರು.ಸೈಕ್ಲಿಸ್ಟ್ಗಳ ಅಭ್ಯಾಸಕ್ಕೆ ಅನುಕೂಲವಾಗುವಂತೆ…
ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ
ಭೂತನಾಳ ಕೆರೆ-ಅರಕೇರಿ ಜಾಕ್ವೆಲ್ಗಳ ಪರಿಶೀಲನೆ ಸಪ್ತಸಾಗರ ವಾರ್ತೆ,ವಿಜಯಪುರ, ಅ.17:ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, ನೀರು ಪೂರೈಸುವ ಅಗತ್ಯಕ್ರಮಕ್ಕೆ ಜಿಲ್ಲಾಧಿಕಾರಿಡಾ.ಆನಂದ.ಕೆ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಧಿಕಾರಿಗಳು, ಮಹಾನಗರ ಪಾಲಿಕೆ ಆಯುಕ್ತರು ಹಾಗೂ ನಗರ ನೀರು ಸರಬರಾಜು ಇಲಾಖೆಯ ಅಧಿಕಾರಿಗಳು ಭೂತನಾಳ ಕೆರೆಗೆ ಭೇಟಿ ನೀಡಿ, ನೀರಿನ ಸಂಗ್ರಹದ ಪ್ರಮಾಣ, ಲಭ್ಯತೆ ಹಾಗೂ ನಗರಕ್ಕೆ ಪೂರೈಸುವ ಸಾಮರ್ಥ್ಯವನ್ನು ಪರಿಶೀಲಿಸಿದರು.ನಂತರ ಅರಕೇರಿಯ ಜಾಕ್ವೆಲ್ ಭೇಟಿ ನೀಡಿ, ಪಂಪ್ಗಳ ಕಾರ್ಯನಿರ್ವಹಣೆ, ನೀರು ಎತ್ತುವ ಸಾಮರ್ಥ್ಯ ಮತ್ತು ಸರಬರಾಜು ವ್ಯವಸ್ಥೆಯ…
ಜಿ.ಪಂ., ತಾ.ಪಂ. ಚುನಾವಣೆಗಳಲ್ಲಿ ಅಲ್ಪಸಂಖ್ಯಾತರಿಗೆ ಪ್ರಾತಿನಿಧ್ಯ ನೀಡಿ
ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ನೀಡಲು ಎಸ್.ಎಂ. ಪಾಟೀಲ ಗಣಿಹಾರ ಒತ್ತಾಯ ಸಪ್ತಸಾಗರ ವಾರ್ತೆ, ವಿಜಯಪುರ, ಅ. 17:ಜಿಲ್ಲಾ ಪಂಚಾಯತ ಹಾಗೂ ತಾಲೂಕು ಪಂಚಾಯತ ಚುನಾವಣೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ಕಲ್ಪಿಸಬೇಕು. ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕನಿಷ್ಠ ಒಂದು ಜಿಲ್ಲಾ ಪಂಚಾಯತ ಅಥವಾ ತಾಲೂಕು ಪಂಚಾಯತ ಕ್ಷೇತ್ರಕ್ಕೆ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ಎಸ್.ಎಂ. ಪಾಟೀಲ ಗಣಿಹಾರ ಒತ್ತಾಯಿಸಿದರು.ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿಯೂ…
ಎಸ್ಸಿ, ಎಸ್ಟಿ ಮೀಸಲಾತಿ ರಕ್ಷಿಸಲು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿ:ಚಲವಾದಿ
ಸಪ್ತಸಾಗರ ವಾರ್ತೆ,ವಿಜಯಪುರ, ಅ. 17: ಜನಸಂಖ್ಯೆ ಆಧಾರಿತ ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ನಲ್ಲಿ ಹಿನ್ನಡೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೂಡಲೇ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿ ಮೀಸಲಾತಿಯನ್ನು ರಕ್ಷಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಶ್ರೀಶೈಲ ಚಲವಾದಿ ಆಗ್ರಹಿಸಿದ್ದಾರೆ.ಜನಸಂಖ್ಯೆಗೆ ಅನುಗುಣವಾಗಿ ಎಸ್ಸಿ, ಎಸ್ಟಿ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸುವ ಅಧಿಕಾರವನ್ನು ಸಂವಿಧಾನ ಸರ್ಕಾರಗಳಿಗೆ ನೀಡಿದೆ. ಆದರೆ ಕಾಂಗ್ರೆಸ್, ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳ ಸರ್ಕಾರಗಳು ಎಸ್ಸಿ, ಎಸ್ಟಿ, ಒಬಿಸಿ ಹಾಗೂ…
ಆರ್ಥಿಕ ಸಾಕ್ಷರತೆ ಪ್ರತಿಯೊಬ್ಬರಿಗೂ ಅಗತ್ಯ: ಸರ್ಕಾರಿ ಯೋಜನೆಗಳ ಸದ್ಬಳಕೆಗೆ ಕರೆ
ಸಪ್ತಸಾಗರ ವಾರ್ತೆ,ಕಂಬಾಗಿ, ಅ.17: ಗ್ರಾಮೀಣ ಜನರಲ್ಲಿ ಆರ್ಥಿಕ ಸಾಕ್ಷರತೆ ಹೆಚ್ಚಿಸುವುದು ಹಾಗೂ ಬ್ಯಾಂಕಿಂಗ್, ವಿಮೆ ಮತ್ತು ಸಾಮಾಜಿಕ ಭದ್ರತಾ ಯೋಜನೆಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಕಂಬಾಗಿ ಗ್ರಾಮದಲ್ಲಿ ಆರ್ಥಿಕ ಸಾಕ್ಷರತಾ ಕಾರ್ಯಕ್ರಮ ನಡೆಯಿತು.ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಸಿದ್ದಯ್ಯ ಬಿ. ಅವರು ವಿವಿಧ ಬ್ಯಾಂಕಿಂಗ್, ವಿಮಾ ಹಾಗೂ ಸಾಮಾಜಿಕ ಭದ್ರತಾ ಯೋಜನೆಗಳ ಕುರಿತು ಮಾಹಿತಿ ನೀಡಿ, ಅರ್ಹರು ಸರ್ಕಾರಿ ಯೋಜನೆಗಳ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.ರುಡ್ಸೆಟ್ ಸಂಸ್ಥೆಯ ನಿರ್ದೇಶಕ ಮುಕುಂದ ಝಳಕಿ ಅವರು ಸ್ವಯಂ…
ಆರೋಗ್ಯ ಕ್ಷೇತ್ರಕ್ಕೆ ಎಕ್ಸಲೆಂಟ್ ನರ್ಸಿಂಗ್ ಕಾಲೇಜಿನ ಕೊಡುಗೆ ಅನನ್ಯ: ಮಲ್ಲನಗೌಡ ಬಿರಾದಾರ
ಸಪ್ತಸಾಗರ ವಾರ್ತೆ,ವಿಜಯಪುರ, ಅ. 17: ಆರೋಗ್ಯ ಕ್ಷೇತ್ರದ ಬೆಳವಣಿಗೆಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದ್ದು, ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ನುರಿತ ಶುಶ್ರೂಷಕರನ್ನು ರೂಪಿಸುತ್ತಿರುವ ಎಕ್ಸಲೆಂಟ್ ನರ್ಸಿಂಗ್ ಕಾಲೇಜಿನ ಕೊಡುಗೆ ಅನನ್ಯವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮಲ್ಲನಗೌಡ ಬಿರಾದಾರ ಹೇಳಿದರು.ನಗರದಲ್ಲಿ ಮಾತೋಶ್ರೀ ಗೌರಮ್ಮ ಅಪ್ಪಾಸಾಹೇಬ ಬಬಲೇಶ್ವರ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಎಕ್ಸಲೆಂಟ್ ಕಾಲೇಜ್ ಆಫ್ ನರ್ಸಿಂಗ್ನ ನಾಲ್ಕನೇ ಬ್ಯಾಚ್ ವಿದ್ಯಾರ್ಥಿಗಳ ದೀಪದಾನ ಹಾಗೂ ಪ್ರತಿಜ್ಞಾವಿಧಿ ಬೋಧನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು….
ರೈತರಿಗೆ ಎಕರೆಗೆ ₹25 ಸಾವಿರ ಪರಿಹಾರ ನೀಡಿ: ಭೀಮ್ ರಾಜ್ಯ ದಲಿತ ಸೇವಾ ಸಮಿತಿ ಆಗ್ರಹ
ಸಪ್ತಸಾಗರ ವಾರ್ತೆ,ವಿಜಯಪುರ, ಅ. 17:ಮಳೆಯ ಕೊರತೆಯಿಂದ ಬೆಳೆ ನಷ್ಟ ಅನುಭವಿಸಿರುವ ವಿಜಯಪುರ ಜಿಲ್ಲೆ ಸೇರಿದಂತೆ ರಾಜ್ಯದ ಬರಪೀಡಿತ ಪ್ರದೇಶಗಳ ರೈತರಿಗೆ ಪ್ರತಿ ಎಕರೆಗೆ ₹25 ಸಾವಿರ ಪರಿಹಾರ ನೀಡಬೇಕು ಎಂದು ಭೀಮ್ ರಾಜ್ಯ ದಲಿತ ಸೇವಾ ಸಮಿತಿ (ರಿ) ಆಗ್ರಹಿಸಿದೆ.ಸಮಿತಿಯ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ನೀಲಾಂಬಿಕಾ ಕಟ್ಟಿಮನಿ ಹಾಗೂ ರಾಜ್ಯ ಅಲ್ಪಸಂಖ್ಯಾತರ ಮಹಿಳಾ ಘಟಕದ ಅಧ್ಯಕ್ಷೆ ಸಲ್ಮಾ ಮೈರಾಗೋಳ ನೇತೃತ್ವದಲ್ಲಿ ಈ ಬೇಡಿಕೆ ಮುಂದಿಡಲಾಗಿದೆ.ಬೀಜ, ಗೊಬ್ಬರ, ಔಷಧಿ ಹಾಗೂ ಕೃಷಿ ಕಾರ್ಮಿಕರ ವೆಚ್ಚ ಹೆಚ್ಚಿರುವ ಸಂದರ್ಭದಲ್ಲಿ…
ಅ. 18ರಂದು ಉಪ್ಪಾರ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರ
ಸಪ್ತಸಾಗರ ವಾರ್ತೆ,ವಿಜಯಪುರ, ಅ. 17:ವಿಜಯಪುರ ಜಿಲ್ಲಾ ಉಪ್ಪಾರ ನೌಕರರ ಸಂಘದ ವತಿಯಿಂದ 2025-26ನೇ ಸಾಲಿನ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರು, ನೂತನವಾಗಿ ನೇಮಕಗೊಂಡ ನೌಕರರು ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಅ. 18ರಂದು ಬೆಳಿಗ್ಗೆ 10.30ಕ್ಕೆ ನಗರದ ಸೆಟಲೈಟ್ ಬಸ್ ನಿಲ್ದಾಣದ ಸಮೀಪದ ರಾಜರಾಜೇಶ್ವರಿ ಮಂಗಲ ಕಾರ್ಯಾಲಯದಲ್ಲಿ ಆಯೋಜಿಸಲಾಗಿದೆ.ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ವಿದ್ಯಾನಗರದ ಚನ್ಮೂಲಾದ್ರಿ ಶಿಲಾಪುರಿ ಮಹಾಸಂಸ್ಥಾನದ ಭಗೀರಥ ಪೀಠದ ಡಾ. ಪುರುಷೋತ್ತಮಾನಂದ ಪುರಿ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ….
ಕಬ್ಬು ಬೆಳೆಗಾರರ ಪರ ಬಿಜೆಪಿ; ಅಗತ್ಯಬಿದ್ದರೆ ಹೋರಾಟಕ್ಕೂ ಸಾಥ್: ನಡಹಳ್ಳಿ
ರಾಜ್ಯ ಸರ್ಕಾರದ ವಿರುದ್ಧ ಕಿಡಿ | ರೈತರ ಸಮಸ್ಯೆ ಪರಿಹರಿಸದೆ ಹೋರಾಟದ ಬಗ್ಗೆ ಮೊಸಳೆ ಕಣ್ಣೀರು ಬೇಡ ಸಪ್ತಸಾಗರ ವಾರ್ತೆ,ವಿಜಯಪುರ, ಅ. 15:ಕಬ್ಬು ಬೆಳೆಗಾರರು ಎದುರಿಸುತ್ತಿರುವ ತೂಕ, ರಿಕವರಿ ಹಾಗೂ ಕಟಾವು ಸೇರಿದಂತೆ ವಿವಿಧ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಬೇಕು. ರೈತರ ನ್ಯಾಯಯುತ ಬೇಡಿಕೆಗಳ ಪೈಕಿ ಶೇ.70ರಷ್ಟು ಬೇಡಿಕೆಗಳನ್ನು ರಾಜ್ಯ ಸರ್ಕಾರವೇ ಈಡೇರಿಸಬೇಕಿದ್ದು, ಸಮಸ್ಯೆಗಳನ್ನು ಬಗೆಹರಿಸದೆ ರೈತರ ಹೋರಾಟದ ಬಗ್ಗೆ ಮೊಸಳೆ ಕಣ್ಣೀರು ಸುರಿಸುವುದು ಸರಿಯಲ್ಲ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಮಾಜಿ…



