8 ರೌಡಿಶೀಟರ್ ಗಡಿಪಾರು

ಸಪ್ತಸಾಗರ ವಾರ್ತೆ ವಿಜಯಪುರ, ಆ. 20:
ಜಿಲ್ಲೆಯಲ್ಲಿ ಮುಂಬರುವ ಹಬ್ಬ ಹರಿದಿನಗಳ ಸಂದರ್ಭದಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಯ್ದುಕೊಂಡು ಬರುವ ಹಿನ್ನೆಲೆಯಲ್ಲಿ ಎಂಟು ಜನ ರೌಡಿಶೀಟರ್ ಗಳನ್ನು ವಿವಿಧ ಜಿಲ್ಲೆಗಳಿಗೆ ಗಡಿಪಾರು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.
ಕೊಲೆ, ಕೊಲೆಗೆ ಯತ್ನ, ಆಯುಧ ಕಾಯ್ದೆ, ದೊಂಬಿ, ಹಲ್ಲೆ, ಕನ್ನಾ ಕಳವು ಮುಂತಾದ ಅಪರಾಧಿಕ ಪ್ರಕರಣಗಳಲ್ಲಿ ಈ ರೌಡಿ ಶೀಟರ್ ಗಳು ಭಾಗಿಯಾಗಿದ್ದರು.
ಇನ್ನು 19 ಜನ ರೌಡಿ ಶೀಟರ್ ಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡಲು ಆದೇಶ ಹೊರಡಿಸಲಾಗುತ್ತಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share