ಸಪ್ತಸಾಗರ ವಾರ್ತೆ,ವಿಜಯಪುರ,ಜು. 24:
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಹಾಗೂ ಸದಸ್ಯರು ಜುಲೈ 25ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ
ಆಯೋಗದ ಸದಸ್ಯರುಗಳಾದ ಶೇಖರಗೌಡ ರಾಮತ್ನಾಳ, ಶಶಿಧರ ಕೋಸಂಬೆ, ಡಾ. ಕೆ.ಟಿ. ತಿಪ್ಪೇಸ್ವಾಮಿ, ಮಂಜು, ವೆಂಕಟೇಶ ಹಾಗೂ ಅಪರ್ಣಾ ಎಂ. ಕೊಳ್ಳಾ ಅಧ್ಯಕ್ಷರ ಜೊತೆಗೂಡಿ ಜಿಲ್ಲೆಯ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಜುಲೈ 25ರಂದು ಬೆಳಿಗ್ಗೆ 9ಗಂಟೆಯಿಂದ 1.30ರವರೆಗೆ ಮಕ್ಕಳ ಸಂಸ್ಥೆಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸುವ ಅವರು ಮಧ್ಯಾಹ್ನ 2.30ರಿಂದ ಸಂಜೆ 5.30ರವರೆಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಸಭೆಯ ನಂತರ ವಿಜಯಪುರದಿಂದ ಬೆಂಗಳೂರಿಗೆ ಮರು ಪ್ರಯಾಣ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಹಾಗೂ ಸದಸ್ಯರ ಜಿಲ್ಲಾ ಪ್ರವಾಸ


