ಸಪ್ತಸಾಗರ ವಾರ್ತೆ,ವಿಜಯಪುರ, ಜು. 26:
ಬಿ.ಎಲ್.ಡಿ.ಇ ಆಸ್ಪತ್ರೆ ನಗರ ಆರೋಗ್ಯ ಕೇಂದ್ರ ಮತ್ತು ಹೈಟೆಕ್ ಆಯುರ್ವೇದ ಆಸ್ಪತ್ರೆ ಹಾಗೂ ಶೈಕ್ಷಣಿಕ ಭವನದ ಉದ್ಘಾಟನೆ ಸಮಾರಂಭ ಜು. 27 ರಂದು ನಗರದಲ್ಲಿ ನಡೆಯಲಿದೆ.
ಬಿ.ಎಲ್.ಡಿ.ಇ. ಸಂಸ್ಥೆಯ ಎ.ವಿ.ಎಸ್.ಆಯುರ್ವೇದ ಮಹಾವಿದ್ಯಾಲಯ ಆಸ್ಪತ್ರೆ ಹಾಗೂ ಸಂಶೋಧನ ಕೇಂದ್ರದ ಆವರಣದಲ್ಲಿ ಬೆಳಗ್ಗೆ 8 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಬೆಂಗಳೂರಿನ ಶ್ರೀ ಬೇಲಿಮಠ ಮಹಾಸಂಸ್ಥಾನದ ಶ್ರೀ ಶಿವಾನುಭವ ಚರಮೂರ್ತಿ ಶಿವರುದ್ರ ಮಹಾಸ್ವಾಮಿಜಿ ಉದ್ಘಾಟನೆ ನೆರವೇರಿಸಲಿದ್ದಾರೆ.
ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಉಪಸ್ಥಿತರಿರಲಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾಳೆ ಬಿ.ಎಲ್.ಡಿ.ಇ ಹೈಟೆಕ್ ಆಯುರ್ವೇದ ಆಸ್ಪತ್ರೆ ಉದ್ಘಾಟನೆ
