ಸಪ್ತಸಾಗರ ವಾರ್ತೆ, ವಿಜಯಪುರ, ಜು. 31:
ವಿಜಯಪುರ ಜಿಲ್ಲೆಯನ್ನು 371 ಜೆ ಅಡಿಯಲ್ಲಿ ಸೇರಿಸುವಂತೆ ಆಗ್ರಹಿಸಿ ರೈತ ಭಾರತ ಪಕ್ಷ ಗುರುವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.
ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಮೆರವಣಿಗೆಯಲ್ಲಿ ಹೊರಟ ರೈತ ಭಾರತ ಪಕ್ಷದ ಕಾರ್ಯಕರ್ತರು ನಗರದ ಪ್ರಮುಖ ಬೀದಿಗಳಲ್ಲಿ ಹಾಯ್ದು ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ವಿಜಯಪುರ ಜಿಲ್ಲೆಯನ್ನು 371 ಜೆ ಗೆ ಸೇರಿಸಲು ಆಗ್ರಹಿಸಿದರು.
ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಮಾತನಾಡಿ, ಹಿಂದುಳಿದ ವಿಜಯಪುರ ಜಿಲ್ಲೆಯನ್ನು 371 ಜೆ ಅಡಿಗೆ ಸೇರಿಸದೆ ಜಿಲ್ಲೆಗೆ ಭಾರಿ ಅನ್ಯಾಯ ಮಾಡಿದಂತಾಗಿದೆ. ಅನ್ಯಾಯ ಸರಿಪಡಿಸಲು ಸರ್ಕಾರ ಕೂಡಲೇ ವಿಜಯಪುರ ಜಿಲ್ಲೆಯನ್ನೂ 371 ಜೆ ಮೀಸಲಾತಿಗೆ ಸೇರಿಸಬೇಕು ಎಂದು ಒತ್ತಾಯಿಸಿದರು.
ಈ ಬೇಡಿಕೆಗೆ ಸರ್ಕಾರ ಸ್ಪಂದಿಸದಿದ್ದರೆ ಬರುವ ದಿನಗಳಲ್ಲಿ ಉಗ್ರ ಹೋರಾಟ ಕೈಗೊಳ್ಳಬೇಕಾಗುತ್ತದೆ ಎಂದು ಕೆಂಗನಾಳ ಎಚ್ಚರಿಕೆ ನೀಡಿದರು.
ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಪ್ರತಿಭಟನೆಕಾರರಿಂದ ಮನವಿ ಸ್ವೀಕರಿಸಿದರು.
ಪಕ್ಷದ ಅನೇಕ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ವಿಜಯಪುರ ಜಿಲ್ಲೆಯನ್ನು 371 ಜೆ ಅಡಿಗೆ ಸೇರಿಸಲು ಆಗ್ರಹಿಸಿ ಪ್ರತಿಭಟನೆ ಮೆರವಣಿಗೆ
