ಸಪ್ತಸಾಗರ ವಾರ್ತೆ, ವಿಜಯಪುರ, ಆ. 2:
ಕೋರ್ಟ್ ತೀರ್ಪಿಗೆ ಎಲ್ಲರೂ ತಲೆ
ಬಾಗಲೇಬೇಕು ಎಂದು ರಾಜ್ಯ ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಕುಮಾರಿ ಮಂಜುಳಾ ಹೇಳಿದರು.
ಶನಿವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಕೋರ್ಟ್ ತೀರ್ಪು ನೀಡಿರುವುದಕ್ಕೆ ಪ್ರತಿಕ್ರಿಯೆ ನೀಡಿದರು.
ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಕುಮಾರಿ ಮಂಜುಳಾ ಹೇಳಿದರು. ಜನಪ್ರತಿನಿಧಿಗಳಾದವರಿಗೆ ಇಂಥ ನಡವಳಿಕೆ ಸರಿಯಲ್ಲ ಎಂದು ಖಂಡಿಸಿದರು. ಜನಪ್ರತಿನಿಧಿಗಳ ಇಂತಹ ನಡವಳಿಕೆಯನ್ನು ಸಹಿಸಲು ಸಾಧ್ಯವಿಲ್ಲ. ಸಾರ್ವಜನಿಕವಾಗಿ ಬರುವ ಜನಪ್ರತಿನಿಧಿಗಳಿಗೆ ಸಚ್ಚಾರಿತ್ರ್ಯ ಬಹಳ ಮುಖ್ಯ ಎಂದರು.
ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ ಅದು ನ್ಯಾಯಾಲಯದಲ್ಲಿ ಇದೆ. ಇದು ದುರುದ್ದೇಶಪೂರಿತ ಕೇಸ್. ಈ ಕೇಸ್ ನ್ಯಾಯಾಲಯದಲ್ಲಿ ಇದೆ. ಹೀಗಾಗಿ ಈ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡಲ್ಲ ಎಂದರು.
ಧರ್ಮಸ್ಥಳ ಪ್ರಕರಣವನ್ನು ಎಸ್‌ಐಟಿ ತನಿಖೆ ಮಾಡುತ್ತಿರುವುದಕ್ಕೆ ಬಿಜೆಪಿ ಸ್ವಾಗತ ಮಾಡಿದೆ. ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಎಲ್ಲರೂ ಸ್ವಾಗತ ಮಾಡಿದ್ದಾರೆ. ತನಿಖೆ ಬಳಿಕ ಸತ್ಯಾಸತ್ಯತೆ ಹೊರಗಡೆ ಬರಬೇಕು ಎಂದು ತಿಳಿಸಿದರು.
ಕೋರ್ಟ್ ತೀರ್ಪಿಗೆ ಎಲ್ಲರೂ ತಲೆಬಾಗಲೇಬೇಕು- ಮಂಜುಳಾ


