ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲರ ಪ್ರವಾಸ

ಸಪ್ತಸಾಗರ ವಾರ್ತೆ, ವಿಜಯಪುರ, ಆ.4:
ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು ಆ.8ರಿಂದ 12 ರವರೆಗೆ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಆ.8ರಂದು ಸಂಜೆ ಬೆಳಗಾವಿಯಿಂದ ಜಿಲ್ಲೆಯ ಪಡೇಕನೂರಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ.
ಆ.9 ಹಾಗೂ 10ರಂದು ಪರಿಶೀಲನೆ ನಡೆಸುವರು.
ಆ.11 ರಂದು ಬೆಳಿಗ್ಗೆ 8-30ಕ್ಕೆ ಪಡೇಕನೂರದಿಂದ ಹೊರಟು ವಿಜಯಪುರಕ್ಕೆ ಆಗಮಿಸಿ, ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮತ್ತೆ ಪಡೇಕನೂರಗೆ ಪ್ರಯಾಣ ಬೆಳೆಸಿ ವಾಸ್ತವ್ಯ ಮಾಡಲಿದ್ದಾರೆ.
ಆ.12 ರಂದು ಬೆಳಿಗ್ಗೆ 9 ಗಂಟೆಗೆ ವಿವಿಧ ಕಾರ್ಯಗಳ ಪರಿಶೀಲನೆ ನಡೆಸಿ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

Share