ಬಸ್ ಪಲ್ಟಿ: ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು

ಸಪ್ತಸಾಗರ ವಾರ್ತೆ, ವಿಜಯಪುರ, ಆ. 4: ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ ಹಲವರಿಗೆ ಸಣ್ಣ ಪುಟ್ಟ ಗಾಯಗಳಾದ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಮನ್ನಾಪುರ ಬಳಿ ಸೋಮವಾರ ಸಂಭವಿಸಿದೆ.
ಸಿಂದಗಿಯಿಂದ ಹೊನ್ನಳ್ಳಿಗೆ ತೆರಳುತ್ತಿದ್ದ ಬಸ್ ಹದಗೆಟ್ಟ ರಸ್ತೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣ ಹಾನಿಯಾಗಿಲ್ಲ. ಬಸ್‌ನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪಾರಾಗಿದ್ದಾರೆ. ಗಾಯಾಳುಗಳನ್ನು ಸಿಂದಗಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸಿಂದಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share