ಸಪ್ತಸಾಗರ ವಾರ್ತೆ, ವಿಜಯಪುರ, ಆ. 11: ವಿಜಯಪುರ ಮಹಾನಗರ ಪಾಲಿಕೆ ಮಹಾಪೌರರಾಗಿ ಎಂ.ಎಸ್.ಕರಡಿ ಹಾಗೂ ಉಪ ಮಹಾಪೌರರಾಗಿ ಸುಮಿತ್ರಾ
ಜಾಧವ ಆಯ್ಕೆಯಾಗಿದ್ದಾರೆ.
ಬೆಳಗಾವಿ ಪ್ರಾದೇಶಿಕ ಆಯುಕ್ತ ಸಂಜಯ್ ಶೆಟ್ಟೆನವರ ವಿಜಯಪುರ ಮಹಾನಗರ ಪಾಲಿಕೆಯ 22ನೇ ಮಹಾಪೌರ ಹಾಗೂ ಉಪ ಮಹಾಪೌರರ ಆಯ್ಕೆಯ ಚುನಾವಣೆ ಫಲಿತಾಂಶವನ್ನು ಸೋಮವಾರ ಅಧಿಕೃತವಾಗಿ ಘೋಷಿಸಿದರು.
ಜನೆವರಿ, ಫೆಬ್ರವರಿ ತಿಂಗಳಲ್ಲಿ ನಡೆದ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ ಚುನಾವಣೆ ಫಲಿತಾಂಶವನ್ನು ಘೋಷಣೆ ಮಾಡಲು ಈ ಮುಂಚೆ ಆ.7ರಂದು ಸಭೆ ನಿಗದಿಪಡಿಸಲಾಗಿತ್ತು. ನಂತರ ಈ ದಿನಾಂಕವನ್ನು ಆ. 11ಕ್ಕೆ ಮುಂದೂಡಲಾಗಿತ್ತು.
ಇಂದು ನಡೆದ ಸಭೆಯಲ್ಲಿ ಪ್ರಾದೇಶಿಕ ಆಯುಕ್ತ ಸಂಜಯ ಶೆಟ್ಟೆನವರ ಅವರು ಮೇಯರ್, ಉಪ ಮೇಯರ್ ಆಯ್ಕೆಯನ್ನು ಅಧಿಕೃತವಾಗಿ ಪ್ರಕಟಿಸಿದರು.
ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಕಾರ್ ನಲ್ಲಿಯೇ ನೂತನ ಮೇಯರ್ ಉಪಮೇಯರ್ ಆಗಮಿಸಿದ್ದರು. ಮೊದಲ ಬಾರಿಗೆ ಬಿಜೆಪಿ ಮಹಾನಗರ ಪಾಲಿಕೆಯ ಚುಕ್ಕಾಣಿ ಹಿಡಿದಂತಾಗಿದೆ.
ಮಹಾಪೌರರಾಗಿ ಎಂ.ಎಸ್. ಕರಡಿ, ಉಪ ಮಹಾಪೌರರಾಗಿ ಸುಮಿತ್ರಾ ಜಾಧವ ಆಯ್ಕೆ
