ಸಪ್ತಸಾಗರ ವಾರ್ತೆ, ವಿಜಯಪುರ,ಆ. 13:
ಇಲ್ಲಿನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ,ಎಬಿವಿಪಿ ನಿಯೋಗವು ಭೇಟಿ ನೀಡಿತು.
ವಿಶ್ವವಿದ್ಯಾಲಯಕ್ಕೆ ಬೇರೆ ಬೇರೆ ಜಿಲ್ಲೆಗಳಿಂದ ಬರುವ ವಿದ್ಯಾರ್ಥಿನಿಯರಿಗೆ ಅವರ ಅಂಕ ಪಟ್ಟಿ ಹಾಗೂ ಅವರ ಶೈಕ್ಷಣಿಕ ಸಮಸ್ಯೆಗಳು ಒಂದೇ ದಿನದಲ್ಲಿ ಪರಿಹರಿಸಿ ಕೊಡಲು ವಿದ್ಯಾರ್ಥಿ ಪರಿಷತ್ ಆಗ್ರಹಿಸಿತು.
ವಿಶ್ವ ವಿದ್ಯಾಲಯ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಎಬಿವಿಪಿ ರಾಜ್ಯ ವಿಶ್ವವಿದ್ಯಾಲಯಗಳ ಸಂಚಾಲಕ ವಿದ್ಯಾನಂದ ಸ್ಥಾವರಮಠ ಹಾಗೂ ಎಬಿವಿಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಪ್ರವೀಣ ಬಿರಾದಾರ ಅವರು ಉಪಸ್ಥಿತರಿದ್ದರು.
ಅಕ್ಕ ಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯಕ್ಕೆ ಎಬಿವಿಪಿ ನಿಯೋಗ ಭೇಟಿ
