ವಿದೇಶದಲ್ಲಿ ಅಧ್ಯಯನ ಮಾಡಲು ಬಯಸುವವರಿಗೆ ಅವಕಾಶ

ಸಪ್ತಸಾಗರ ವಾರ್ತೆ,ಬೆಂಗಳೂರು, ಆ. 14: ಕರ್ನಾಟಕ ವೃತ್ತಿಪರ ತರಬೇತಿ ಹಾಗೂ ಕೌಶಲ್ಯ ನಿಗಮ ವತಿಯಿಂದ ಆ. 17ರಂದು ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್‌ನಲ್ಲಿ 2025 ನೇ ಸಾಲಿನ ವಿದೇಶಗಳಲ್ಲಿ ಅಧ್ಯಯನ ಮೇಳ ಆಯೋಜಿಸಿದೆ ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ( ಶಿವಕಾಂತಮ್ಮ) ನಾಯಕ ತಿಳಿಸಿದ್ದಾರೆ.
ಎಕ್ಸ್‌ಪೋದಲ್ಲಿ 60 ಕ್ಕೂ ಹೆಚ್ಚು ಪ್ರಮುಖ ಜಾಗತಿಕ ವಿಶ್ವವಿದ್ಯಾಲಯಗಳು ಭಾಗವಹಿಸುವ ನಿರೀಕ್ಷೆ ಇದ್ದು, ವಿಶ್ವವಿದ್ಯಾಲಯದ ಪ್ರತಿನಿಧಿಗಳೊಂದಿಗೆ ಒನ್-ಆನ್-ಒನ್ ಸೆಷನ್, ಸ್ಪಾಟ್ ವಿದ್ಯಾರ್ಥಿ ವೇತನಗಳು ಮತ್ತು ಅರ್ಹತಾ ಮೌಲ್ಯಮಾಪನಗಳು, ವೀಸಾ ಪ್ರಕ್ರಿಯೆ, ಹಣಕಾಸು ಯೋಜನೆ, ಆರೋಗ್ಯ ವಿಮೆ, ಭಾಷಾ ಪ್ರಾವೀಣ್ಯತೆ ಮತ್ತು ಇತರೆ ಮಾರ್ಗದರ್ಶನ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಮೇಳದಲ್ಲಿ ಆಸ್ಟ್ರೇಲಿಯಾ, ಯುನೈಟೆಡ್ ಕಿಂಗ್‌ಡಮ್, ಅಮೆರಿಕಾ, ಐರ್ಲೆಂಡ್, ನ್ಯೂಜಿಲೆಂಡ್ ಮತ್ತು ಮಧ್ಯಪ್ರಾಚ್ಯ ಸೇರಿದಂತೆ ವಿವಿಧ ವಿಶ್ವವಿದ್ಯಾಲಯಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.

Share