ಸಪ್ತಸಾಗರ ವಾರ್ತೆ, ವಿಜಯಪುರ, ಆ.16:
ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ,ಕರ್ನಾಟಕ ಅದಿಜಾಂಬವ ಅಭಿವೃದ್ಧಿ ನಿಗಮ,ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಮೂಲಕ 2025-26 ನೇ ಸಾಲಿಗಾಗಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಕುರಿ ಸಾಕಾಣಿಕ ಉದ್ದೇಶಕ್ಕಾಗಿ ಹಾಗೂ ಸ್ವಾವಲಂಬಿ ಸಾರಥಿ, ಪುಡ್ ಕಾರ್ಟ್ (ಮೊಬೈಲ್ ಕಿಚನ್ ಉದ್ದೇಶಕ್ಕಾಗಿ ಮಾತ್ರ) ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ (ಇತರೆ ಉದ್ದೇಶ) ಹಾಗೂ ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ ಮತ್ತು ಗಂಗಾ ಕಲ್ಯಾಣ,ಭೂ ಒಡೆತನ ಯೋಜನೆಗಳಿಗೆ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ:10-09-2025 ಕೊನೆಯ ದಿನವಾಗಿದೆ.
ಈಗಾಗಲೇ 2023-24 ಹಾಗೂ 2024-25ರ ಅವಧಿಯಲ್ಲಿ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಅರ್ಜಿಗಳನ್ನು ಕರ್ನಾಟಕ ಒನ್,ಗ್ರಾಮ ಒನ್ ಸೇವಾ ಸಿಂಧು ಪೋರ್ಟಲ್ ಮೂಲಕ ಸಲ್ಲಿಸಬಹುದಾಗಿದೆ ಎಂದೂ ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ದೂರವಾಣಿ ಸಂಖ್ಯೆ :08352-276743 ಸಂಪರ್ಕಿಸಬಹುದಾಗಿದೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.
ನಿಗಮಗಳಿಂದ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ


