ಸಪ್ತಸಾಗರ ವಾರ್ತೆ ವಿಜಯಪುರ, ಆ. 16: 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ. ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಶುಕ್ರವಾರ ರಕ್ತದಾನ ಶಿಬಿರ ನಡೆಯಿತು.
ಎಂ. ಬಿ. ಪಾಟೀಲ ಫೌಂಡೇಶನ್ ಸಹಯೋಗದಲ್ಲಿ ನಡೆದ ಈ ಶಿಬಿರದಲ್ಲಿ 41 ವಿದ್ಯಾರ್ಥಿಗಳು ರಕ್ತದಾನ ಮಾಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ. ಎಸ್. ಬಿ. ಕಮತಿ, ಉಪಪ್ರಾಚಾರ್ಯ ಎಸ್. ಎ. ಪಾಟೀಲ, ಸಂಸ್ಥೆಯ ಕಾನೂನು ಸಲಹೆಗಾರ ಹಾಗೂ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ಸಂಯೋಜಕ ಸೂರ್ಯಕಾಂತ ಬಿರಾದಾರ, ಶ್ರೀ ಬಿ. ಎಂ. ಪಾಟೀಲ ಮೆಡಿಕಲ್ ಕಾಲೇಜಿನ ರಕ್ತ ಭಂಡಾರದ ಮುಖ್ಯಸ್ಥ ಡಾ. ಸತೀಶ ಅರಕೇರಿ, ಕಾರ್ಯಕ್ರಮದ ಸಂಯೋಜಕ ಡಾ. ರವೀಂದ್ರಗೌಡ, ಎನ್.ಎಸ್.ಎಸ್ ಅಧಿಕಾರಿ ವಿಜಯಕುಮಾರ ತಳವಾರ, ಹನುಮೇಶ್ ನಾಯಕ, ಗ್ರಂಥಪಾಲಕ ಸದಾಶಿವ ನಾಗನೇಶ್ವರ, ಕಚೇರಿ ಅಧಿಕ್ಷಕ ಸದಾಶಿವ ಕನ್ನೂರ, ಡಾ. ಮುರುಗೇಶ ಪಟ್ಟಣಶೆಟ್ಟಿ, ವಿಶ್ವನಾಥ ಸಕ್ರಿ, ಶ್ರೀಶೈಲ ಯರನಾಳ ಹಾಗೂ ವೀಣಾ ಉಪಸ್ಥಿತರಿದ್ದರು.
ಸ್ವಾತಂತ್ರ್ಯೋತ್ಸವ ಅಂಗವಾಗಿ ರಕ್ತದಾನ ಶಿಬಿರ
