ಬಿ ಎಂ ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 17: ನಗರದ ಬಿ. ಎಲ್. ಡಿ. ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಶಾಲೆಯಲ್ಲಿ ಶನಿವಾರ ಕೃಷ್ಣ ಜನ್ಮಾಷ್ಟಮಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಪ್ರಾಥಮಿಕ ಹಂತದ ಮಕ್ಕಳು ರಾಧಾ ಕೃಷ್ಣನ ವೇಷದಲ್ಲಿ ಬಂದು ನರ್ತಿಸಿದರೆ, ದ್ವಾಪರ ಯುಗವೇ ಧರೆಗಿಳಿದಂತಾಗಿತ್ತು. ನಂತರ ಪ್ರೌಢಶಾಲೆ ವಿಭಾಗದ ನಾಲ್ಕೂ ಸದನಗಳ ವಿದ್ಯಾರ್ಥಿಗಳಿಗೆ ಮೊಸರಿನ ಮೊಡಕೆ ಒಡೆಯುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಪಿರಾಮಿಡ್ ಆಕೃತಿಯಲ್ಲಿ ಒಬ್ಬರ ಮೇಲೊಬ್ಬರು ನಿಂತು, ಮೊಸರಿನ ಮೊಡಕೆ ಒಡೆಯುವ ಸನ್ನೀವೇಶವಂತೂ ಮೈನವಿರೇಳುವಂತೆ ಮಾಡಿತು. ಮೊಸರಿನ ಮೊಡಕೆ ಒಡೆಯಲು ಹತ್ತುವ ಬೀಳುವ ಮೋಜು ಎಲ್ಲರಿಗೂ ಮನರಂಜನೆಯನ್ನುಂಟು ಮಾಡಿತು. ಅಲ್ಲದೇ, ಎಲ್ಲ ವಿದ್ಯಾರ್ಥಿಗಳು ಬಾಲಗೋಪಾಲನಂತೆ ಕಂಗೋಳಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಪ್ರಾಚಾರ್ಯ ಡಾ. ಶೈಜು ಕೆ. ನಾಯರ, ಹಿರಿಯ ಕಾರ್ಯ ಸಂಯೋಜಕಿ ದೀಪಾ ಜಂಬೂರೆ, ವಿದ್ಯಾರ್ಥಿಗಳು, ಪೋಷಕರು, ಶಾಲೆಯ ಬೋಧಕ ಹಾಗೂ ಬೋಧಕರ ಹೊರತಾದ ಸಿಬ್ಬಂದಿ ಉಪಸ್ಥಿತರಿದ್ದರು.

Share this