ಅಕ್ರಮ ಸಿಲಿಂಡರ್ ಅಡ್ಡೆ ಮೇಲೆ ದಾಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 27:
ನಗರದ ಅತಾವುಲ್ಲಾ ಚೌಕ್ ಹತ್ತಿರ ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಗಳಿಂದ ಆಟೋಗಳಿಗೆ ರೀಪಿಲ್ ಮಾಡುತ್ತಿರುವ ಸ್ಥಳದ ಮೇಲೆ ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಬುಧವಾರ ದಾಳಿ ಮಾಡಿ ಅಕ್ರಮ ಸಿಲಿಂಡರ್ ಗಳನ್ನು ವಶಪಡಿಸಿಕೊಂಡರು.
1 ತುಂಬಿದ ಅಡುಗೆ ಅನಿಲ ಸಿಲಿಂಡರ್ ಹಾಗೂ 3 ಖಾಲಿ ಸಿಲಿಂಡರ್ ಗಳನ್ನು, ಮತ್ತು ರಿಪಿಲ್ ಮಾಡಲು ಬಳಸುತ್ತಿದ್ದ ಮೋಟಾರು ಮತ್ತು ತೂಕದ ಯಂತ್ರವನ್ನು ವಶಪಡಿಸಿಕೊಂಡು ಗೋಲ್ ಗುಂಬಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದೆ ಎಂದು
ಆಹಾರ ಇಲಾಖೆಯ ಉಪ ನಿರ್ದೇಶಕ ವಿನಯಕುಮಾರ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share