ಸಪ್ತಸಾಗರ ವಾರ್ತೆ, ವಿಜಯಪುರ, ಆ. 29:
ವಿಜಯಪುರ ನಗರ ಸೇರಿದಂತೆ ವಿಜಯಪುರ, ನಾಗಠಾಣ ಮತ ಕ್ಷೇತ್ರದಲ್ಲಿ ರಸ್ತೆಗಳು ಹದಗೆಟ್ಟು ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ ಎಂದು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಆರೋಪಿಸಿದರು.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಒಂದು ವರ್ಷದಲ್ಲಿ ರಸ್ತೆಗಳು ಹಾಳಾಗಿವೆ. ನಿರ್ವಹಣೆ ಕೊರತೆಯಿಂದ ರಸ್ತೆಗಳು ಹದಗೆಟ್ಟಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಗಮನ ಹರಿಸಿಲ್ಲ. ಇದರಿಂದ ಜನರು ತೊಂದರೆ ಎದುರಿಸುತ್ತಿದ್ದಾರೆ ಎಂದರು.
ಮಹಾನಗರ ಪಾಲಿಕೆಯಲ್ಲಿ ವ್ಯಾಪಕ ಭೃಷ್ಟಾಚಾರ ನಡೆದಿದೆ. ಇ-ಸ್ವತ್ತು ದಂಧೆಯನ್ನಾಗಿ ಮಾಡಿಕೊಂಡಿದ್ದಾರೆ ಎಂದು ಆಪಾದಿಸಿದರು.
ಹಿಂದೂ ಮಹಿಳೆಯರ ಬಗ್ಗೆ ಅವಮಾನಕರವಾಗಿ ಯಾರೇ ಮಾತನಾಡಿದರೂ ತಪ್ಪು. ಮಹಿಳೆಯರಿಗೆ ವಿಶೇಷ ಸ್ಥಾನಮಾನ ಇದೆ. ನ್ಯಾಯವಾದಿ ಖಾದ್ರಿ ಮಹಿಳೆಯರ ಬಗ್ಗೆ ಅವಮಾನಕರವಾಗಿ ಮಾತನಾಡಿದ್ದು ತಪ್ಪು. ಇನ್ನು ಮುಂದೆ ಖಾದ್ರಿ ವಕೀಲರು ಜವಾಬ್ದಾರಿಯುತವಾಗಿ ಮಾತನಾಡಬೇಕು ಎಂದು ಸಲಹೆ ನೀಡಿದರು.
ಶಾಸಕ ಯತ್ನಾಳ ವಿರುದ್ಧ ರಾಜಕೀಯ ಟೀಕೆ ಮಾಡಬಹುದು. ಅವರ ಕುಟುಂಬದ ಮಹಿಳೆಯರ ಬಗ್ಗೆ ಮಾತನಾಡುವುದು ಯಾರಿಗೂ ಶೋಭೆ ತರುವಂತಹದ್ದಲ್ಲ ಎಂದು ಹೇಳಿದರು.
ವಿಜಯಪುರಕ್ಕೆ ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜ್ ಬೇಡ ಎಂದು ಪ್ರತಿಕ್ರಿಯೆ ನೀಡಿದರು.
ನಿರ್ವಹಣೆ ಕೊರತೆಯಿಃದ ವಿಜಯಪುರದಲ್ಲಿ ರಸ್ತೆಗಳು ಹಾಳು: ಪಟ್ಟಣಶೆಟ್ಟಿ ಆರೋಪ


