ಸಪ್ತ ಸಾಗರ ವಾರ್ತೆ, ವಿಜಯಪುರ,ಆ. 31:
ವಿಜಯಪುರದಲ್ಲಿ ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು ಸ್ಥಾಪನೆ ಕೈ ಬಿಟ್ಟು ಸಂಪೂರ್ಣವಾಗಿ ಸರ್ಕಾರವೇ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಬೇಕು ಎಂದು ಹೋರಾಟ ಸಮಿತಿ ನಿಯೋಗ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಅವರಿಗೆ ಮನವಿ ಸಲ್ಲಿಸಿತು.
ಹೋರಾಟ ಸಮಿತಿ ಪದಾಧಿಕಾರಿಗಳ ನಿಯೋಗ ಜಿಲ್ಲಾ ಉಸ್ತುವಾರಿ ಸಚಿವ ಎಮ್.ಬಿ. ಪಾಟೀಲ ಅವರ ಬಳಿ ತೆರಳಿ ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು ಬೇಡ. ಸರ್ಕಾರಿ ವೈದ್ಯಕಿ ಕಾಲೇಜ್ ಸ್ಥಾಪಿಸಬೇಕು ಎಂದು ಕೇಳಿಕೊಳ್ಳಲಾಯಿತು.
ಸರಕಾರಿ ವೈದ್ಯಕೀಯ ಕಾಲೇಜು ಆರಂಭಿಸಲು ಮುಖ್ಯಂತ್ರಿಯವರ ಮೇಲೆ ಒತ್ತಡ ತರುವಂತೆ ಆಗ್ರಹಿಸಲಾಯಿತು.
ಈ ನಿಯೋಗದಲ್ಲಿ ಹೋರಾಟ ಸಮಿತಿಯ ಸಂಚಾಲಕ ಸಮಿತಿಯ ಸದಸ್ಯರುಗಳಾದ ಬಿ.ಭಗವಾನರೆಡ್ಡಿ, ಅರವಿಂದ ಕುಲಕರ್ಣಿ, ಅಕ್ರಮ ಮಾಶ್ಯಾಳಕರ, ಮಲ್ಲಿಕಾರ್ಜುನ ಬಟಗಿ,ಪ್ರಭುಗೌಡ ಪಾಟೀಲ, ದಸ್ತಗೀರ ಉಕ್ಕಲಿ, ಗೀತಾ ಹೆಚ್, ಭರತಕುಮಾರ ಹೆಚ್. ಟಿ, ಬಾಳು ಜೇವೂರ, ಮಲ್ಲಿಕಾರ್ಜುನ ಹೆಚ್ ಟಿ, ಸಂಗಮೇಶ ಸಗರ, ಬಾಬುರಾವ ಬೀರಕಬ್ಬಿ, ಸಿದ್ದಲಿಂಗ ಬಾಗೇವಾಡಿ, ಸಿದ್ರಾಮ ಹಿರೇಮಠ, ಶ್ರೀಕಾಂತ, ಲಲಿತಾ ಬಿಜ್ಜರಗಿ ಮುಂತಾದವರು ಭಾಗವಹಿಸಿದ್ದರು.
ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು ಪ್ರಸ್ತಾವನೆ ಕೈಬಿಡಿ: ಹೋರಾಟ ಸಮಿತಿ ಒತ್ತಾಯ
