ಸಪ್ತಸಾಗರ ವಾರ್ತೆ ವಿಜಯಪುರ, ಸೆ. 6: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ. ಕೆ. ಶಿವಕುಮಾರ ಅವರು ಭರ್ತಿಯಾಗಿರುವ ಆಲಮಟ್ಟಿ ಜಲಾಶಯಕ್ಕೆ ಶನಿವಾರ ಪೂಜೆ ನೆರವೇರಿಸಿ, ಬಾಗಿನ ಸಮರ್ಪಿಸಿದರು. ಸಚಿವರಾದ ಎಂ.ಬಿ. ಪಾಟೀಲ, ಶಿವಾನಂದ ಪಾಟೀಲ, ಆರ್.ಬಿ. ತಿಮ್ಮಾಪುರ, ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ, ಕಾರ್ಯದರ್ಶಿ ಕೃಷ್ಣಮೂರ್ತಿ ಕುಲಕರ್ಣಿ, ಕೆಬಿಜೆಎನ್ಎಲ್ ಎಂ.ಡಿ. ಮೋಹನರಾಜ್ ಮತ್ತಿತರರು ಉಪಸ್ಥಿತರಿದ್ದರು.
ಆಲಮಟ್ಟಿ ಜಲಾಶಯಕ್ಕೆ ಸಿಎಂ, ಡಿಸಿಎಂ ಬಾಗಿನ ಅರ್ಪಣೆ
