ಸಪ್ತಸಾಗರ ವಾರ್ತೆ ವಿಜಯಪುರ, ಸೆ. 13:
ವಿಜಯಪುರ ಜಿಲ್ಲಾ ಕಾಂಗ್ರೆಸ್ ಸೇವಾದಳ ಸಮಿತಿ, ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳ ಸಭೆ ಶನಿವಾರ ಜಿಲ್ಲಾ ಕಾಂಗ್ರೆಸ್ ಕಚೇರಿ ಸಭಾಂಗಣದಲ್ಲಿ ನಡೆಯಿತು.
ಕೆ.ಪಿ.ಸಿ.ಸಿ. ಸೇವಾದಳದ ರಾಜ್ಯ ಅಧ್ಯಕ್ಷ ಎಂ. ರಾಮಚಂದ್ರಪ್ಪನವರು ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿ, ವಿಜಯಪುರ ಜಿಲ್ಲೆ ಹಾಗೂ ರಾಜ್ಯದಲ್ಲಿ ಕೇಂದ್ರ ಸರಕಾರದ ವಿರೋಧಪಕ್ಷದ ನಾಯಕ ರಾಹುಲ್ಗಾಂಧಿ ಅವರ ನಿರ್ದೆಶನದ ಮೇರೆಗೆ ಮತಪಟ್ಟಿಗಳಲ್ಲಿರುವ ದೋಷ ಹಾಗೂ ಮತ ಮೋಸದ ಕುರಿತು ಪಕ್ಷದ ಎಲ್ಲ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸ್ವಯಂ ಪ್ರೇರಣೆಯಿಂದ ಮತದಾರರ ಪಟ್ಟಿಯನ್ನು ಪರಿಶೀಲಿಸಿ ಮನೆ ಮನೆಗೆ ತೆರಳಿ ಮತದಾರರನ್ನು ಜಾಗೃತಗೊಳಿಸುವ ಮೂಲಕ ಚುನಾವಣಾ ಆಯೋಗದ ಹಾಗೂ ಬಿ.ಜೆ.ಪಿ ರವರ ಕುತಂತ್ರಗಳನ್ನು ಬಯಲುಗೊಳಿಸಬೇಕು ಎಂದರು.
ಮುಂಬರುವ ಎಲ್ಲ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಸದೃಢವಾಗಿ ಬೆಳೆಯುವಲ್ಲಿ ತಮ್ಮದೇ ಆದ ಕೊಡುಗೆ ನೀಡಬೇಕು ಹಾಗೂ ಕಾಂಗ್ರೆಸ್ ಸೇವಾದಳದ ವತಿಯಿಂದ ಪ್ರತಿ ತಿಂಗಳ ಕೊನೆಯ ವಾರದಂದು ಪಕ್ಷದ ಕಛೇರಿಯ ಎದುರು ರಾಷ್ಟ್ರ ಧ್ವಜಾರೋಹಣ ಮಾಡಿ ರಾಷ್ಟ್ರ ಪ್ರೇಮದ ಬಗ್ಗೆ ಜಾಗೃತಗೊಳಿಸಬೇಕು ಎಂದು ತಿಳಿಸಿದರು.
ಸೇವಾ ದಳದ ವತಿಯಿಂದ ಮುಂದಿನ ತಿಂಗಳು ವಿಜಯಪುರ ಜಿಲ್ಲೆಯಲ್ಲಿ ಮೂರು ದಿನದ ಬೃಹತ್ ತರಬೇತಿ ಕಾರ್ಯಕ್ರಮ ಮಾಡಬೇಕು. ಈ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯ ಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರುಗಳು, ವಿಧಾನಪರಿಷತ್ ಸದಸ್ಯರುಗಳು ಉಪಸ್ಥಿತರಿರುವರು. ಆ ತರಬೇತಿ ಶಿಬಿರವನ್ನು ತಾವೆಲ್ಲರೂ ಯಶಸ್ವಿಗೊಳಿಸಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಅವರು ಮಾತನಾಡಿ, ಸಂಘಟನೆಯಲ್ಲಿ ತಾವೆಲ್ಲರೂ ಪ್ರಾಮಾಣಿಕತೆಯಿಂದ ದುಡಿದರೆ ಪಕ್ಷ ನಿಮ್ಮನ್ನು ಮುಂದೊಂದು ದಿನ ಗುರುತಿಸಿ ನಿಮಗೆ ಉತ್ತಮವಾದ ಸ್ಥಾನಮಾನ ಕೊಡುತ್ತದೆ. ಕಾಂಗ್ರೆಸ್ ಪಕ್ಷದಲ್ಲಿ ಜಾತಿ, ಭೇದ ಭಾವ ಯಾವುದೇ ಇಲ್ಲ. ಇಲ್ಲಿ ರಾಷ್ಟ್ರದ, ರಾಜ್ಯದ ಒಳತಿಗಾಗಿ ಸರ್ವಜನರ ಹಿತಾಸಕ್ತಿ ಕಾಪಾಡುವದರ ಜೊತೆಗೆ ಸರ್ವರಿಗೂ ಸಮಪಾಲು, ಸಮಬಾಳು ಎನ್
ಮತ ಮೋಸದ ಬಗ್ಗೆ ಜಾಗೃತಿ ಮೂಡಿಸಿ
