ನನ್ನ ಮತ ನನ್ನ ಹಕ್ಕು ಜಾಗೃತಿ ಅಭಿಯಾನಕ್ಕೆ ಚಾಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ.೧೪: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ನನ್ನ ಮತ ನನ್ನ ಹಕ್ಕು ಜಾಗೃತಿ ಅಭಿಯಾನಕ್ಕೆ ಭಾನುವಾರ ನಗರದ ಗೋಳಗುಮ್ಮಟ ಆವರಣದಲ್ಲಿ ಬೈಕ್ ರ‍್ಯಾಲಿಗೆ ಜಿಲ್ಲಾಧಿಕಾರಿ ಕೆ.ಅನಂದ ಚಾಲನೆ ನೀಡಿದರು.
ರಾಜ್ಯದ ರಾಜಧಾನಿಯಲ್ಲಿ ಸೆ.೧೫ರಂದು ಬೃಹತ್ ಕಾರ್ಯಕ್ರಮ ಆಯೊಜಿಸಲಾಗಿದ್ದು, ಪ್ರಜಾಪ್ರಭುತ್ವದ ಕುರಿತು ಎಲ್ಲ ಜಿಲ್ಲೆಗಳಿಂದ ಪ್ರತಿನಿಧಿಗಳನ್ನು ಬೈಕ್ ಮೂಲಕ ಪಾಲ್ಗೊಳ್ಳಲಿದ್ದಾರೆ. ನಮ್ಮ ಜಿಲ್ಲೆಯಿಂದಲೂ ಬೈಕ್ ರ‍್ಯಾಲಿ ಮೂಲಕ ಯುವಕರು ಪ್ರತಿನಿಧಿಸುತ್ತಿದ್ದಾರೆ. ಭವ್ಯವಾದ ಪ್ರಜಾಪ್ರಭುತ್ವ ಪಡೆದ ನಾವುಗಳು ಅದರ ಪಾಲನೆಯನ್ನು ಮಾಡುವುದು ಬಹಳ ಅವಶ್ಯ ಇದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬೈಕ್ ರ‍್ಯಾಲಿ ಸುರಕ್ಷಿತವಾಗಿ ತಲುಪುವಂತೆ ಶುಭ ಕೋರಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪುಂಡಲಿಕ ಮಾನವರ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರಶಾಂತ ಪೂಜಾರಿ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಕೆಯ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಜೆ ಇಂಡಿ, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Share