ಭಾಗ್ಯಲಕ್ಷ್ಮಿ ಯೋಜನೆ: ದಾಖಲೆ‌ ಸಲ್ಲಿಸಲು ಸೂಚನೆ

ಸಪ್ತ ಸಾಗರ ವಾರ್ತೆ ವಿಜಯಪುರ, ಸೆ. 23:
2006-07ನೇ ಸಾಲಿನಲ್ಲಿ ಜನಿಸಿದ ಹೆಣ್ಣು ಮಕ್ಕಳಿಗೆ ಪ್ರಸಕ್ತ ಸಾಲಿನಲ್ಲಿ 18 ವರ್ಷ ಪೂರ್ಣಗೊಂಡಿದ್ದು, ಭಾಗ್ಯಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳು ಯೋಜನೆಯ ಮೊತ್ತ ಪಡೆಯಲು ಅಗತ್ಯ ದಾಖಲಾತಿಗಳನ್ನು ಅಕ್ಟೋಬರ್ 30ರೊಳಗಾಗಿ ವಿಜಯಪುರ (ಗ್ರಾಮೀಣ) ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆಯೂ ಈ‌‌ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ವಿಜಯಪುರ (ಗ್ರಾಮೀಣ) ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Share this