ವೈಜ್ಞಾನಿಕ ತ್ಯಾಜ್ಯ ಸಂಸ್ಕರಣೆ, ವಿಲೇವಾರಿ, ಅನಿಲ ತಯಾರಿಕೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮಧ್ಯೆ ಒಪ್ಪಂದ

ಸಪ್ತಸಾಗರ ವಾರ್ತೆ, ಬೆಂಗಳೂರು:
ನಗರದಲ್ಲಿ ವೈಜ್ಞಾನಿಕ ತ್ಯಾಜ್ಯ ಸಂಸ್ಕರಣೆ, ವಿಲೇವಾರಿ, ಅನಿಲ ತಯಾರಿಕೆ ಸಂಬಂಧದ ಒಪ್ಪಂದಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮುಖ್ಯ ಆಯುಕ್ತ ಡಾ. ಮಹೇಶ್ವರರಾವ್ ಹಾಗೂ ಭಾರತೀಯ ಅನಿಲ ಪ್ರಾಧಿಕಾರದ (ಗೇಲ್) ಕಾರ್ಯ ನಿರ್ವಾಹಕ ನಿರ್ದೇಶಕ ಎಸ್. ಎನ್. ಯಾದವ್ ಅವರು ಡಿಸಿಎಂ ಡಿ.ಕೆ. ಶಿವಕುಮಾರ ಅವರ ಸಮ್ಮುಖದಲ್ಲಿ ವಿಧಾನಸೌಧದಲ್ಲಿ ಬುಧವಾರ ಸಹಿ ಹಾಕಿ, ಕಡತ ವಿನಿಮಯ ಮಾಡಿಕೊಂಡರು.
ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿ ನಾಥ್, ಮುಖ್ಯ ಆಯುಕ್ತ ಮಹೇಶ್ವರರಾವ್, ಬೆಂಗಳೂರು ಘನ ತ್ಯಾಜ್ಯ ವಿಲೇವಾರಿ ನಿಯಮಿತದ ಸಿಇಓ ಕರೀಗೌಡ ಮತ್ತಿರರು ಉಪಸ್ಥಿತರಿದ್ದರು.

Share this