ಸಪ್ತಸಾಗರ ವಾರ್ತೆ ವಿಜಯಪುರ, ಅ. 19: ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿಯನ್ನಾಗಿ ಮಹೇಂದ್ರಕುಮಾರ್ ನಾಯ್ಕ ಅವರನ್ನು ನೇಮಕ ಮಾಡಲಾಗಿದೆ.
ಸಂಘಟನೆ ರಾಜ್ಯಾಧ್ಯಕ್ಷ ವಿಜಯ ಜಾಧವ್ ಅವರು ಈ ನೇಮಕ ಮಾಡಿ ಆದೇಶಿಸಿದ್ದಾರೆ.
ನಿಮ್ಮ ಸೇವಾ ಮನೋಭಾವ, ಸಾಮಾಜಿಕ ಚಟುವಟಿಕೆ ಹಾಗೂ ಬಂಜಾರ ಸಮಾಜಕ್ಕೆ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ಈ ಜವಾಬ್ದಾರಿ ವಹಿಸಲಾಗಿದೆ. ನೀವು ಸಂಘದ ಸಂವಿಧಾನ, ನಿಯಮ ಮತ್ತು ಮಾರ್ಗಸೂಚಿಗಳನ್ನು ಅನುಸರಿಸಿ, ಸಂಘದ ಹಿತಾಸಕ್ತಿ ಹಾಗೂ ಬಂಜಾರ ಸಮಾಜದ ಅಭಿವೃದ್ಧಿಗಾಗಿ ಕಾರ್ಯ ನಿರ್ವಹಿಸಬೇಕು.
ಸಂಘಟನೆಯ ಸದಸ್ಯತ್ವವನ್ನು ಹೆಚ್ಚಿಸುವುದರ ಜೊತೆಗೆ ಬಂಜಾರ ಸಮಾಜದ ಸಭೆ, ಸಮಾರಂಭ ಹಾಗೂ ಹೋರಾಟಗಳನ್ನು ನಿಯಮಿತವಾಗಿ ಕೈಗೊಂಡು ಬಲಿಷ್ಠ ಸಮಾಜ ಕಟ್ಟಲು ನಿಸ್ವಾರ್ಥ ಮನೋಭಾವದಿಂದ ಸೇವೆಯನ್ನು ಸಲ್ಲಿಸಲು ಆದೇಶದಲ್ಲಿ ಸೂಚಿಸಲಾಗಿದೆ.
ಮಹೇಂದ್ರಕುಮಾರ್ ನಾಯ್ಕ ಆಯ್ಕೆ


