ಜೇನುಸಾಕಾಣಿಕೆ ತರಬೇತಿಗೆ ರೈತರಿಂದ ಅರ್ಜಿ ಕರೆ

ಸಪ್ತಸಾಗರ ವಾರ್ತೆ, ವಿಜಯಪುರ,ಅ. 21: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಬೀಳಗಿ ಜೇನುಸಾಕಾಣಿಕೆ ತರಬೇತಿ ಕೇಂದ್ರದಲ್ಲಿ 2025ರ ನ.4 ರಿಂದ 2026ರ ಫೆ.3ರವರೆಗೆ 3 ತಿಂಗಳ ಜೇನುಸಾಕಾಣಿಕೆ ತರಬೇತಿ ಹಮ್ಮಿಕೊಂಡಿದ್ದು, ತರಬೇತಿ ಪಡೆಯಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿಜಯಪುರ ಜಿಲ್ಲೆಯಿಂದ ಓರ್ವ ರೈತ ಮಕ್ಕಳಿಗೆ ತರಬೇತಿ ಪಡೆಯಲು ಅವಕಾಶವಿದ್ದು, ಅರ್ಜಿಯನ್ನು ತೋಟಗಾರಿಕೆ ಜಂಟಿ ನಿರ್ದೇಶಕರು (ಜಿ.ಪಂ.) ವಿಜಯಪುರ ಹಿರಿಯ ಸಹಾಯ ತೋಟಗಾರಿಕೆ ನಿರ್ದೇಶಕರು ವಿಜಯಪುರ ಅಥವಾ ಇಲಾಖೆ ವೆಬ್‍ಸೈಟ್ https://horticulturedir.karnataka.gov.in ನಿಂದ ಡೌನ್‍ಲೋಡ್ ಮಾಡಿಕೊಂಡು ಭರ್ತಿ ಮಾಡಿ ಸಾಮಾನ್ಯ ಅಭ್ಯರ್ಥಿಗಳಿಗೆ ರೂ.20, ಪ.ಜಾತಿ, ಪ.ಪಂಗಡ ಅಭ್ಯರ್ಥಿಗಳು 10 ರೂ. ಮೌಲ್ಯದ ಐಪಿಓ-ಡಿಡಿಯನ್ನು ಜಿಲ್ಲೆಯ ತೋಟಗಾರಿಕೆ ಜಂಟಿ ನಿರ್ದೇಶಕರ ಹೆಸರಿನಲ್ಲಿ ಪಡೆದು ಅರ್ಜಿ ಜೊತೆ ಲಗತ್ತಿಸಿ ದಿನಾಂಕ : 30-10-2025ರೊಳಗೆ ಸಲ್ಲಿಸಬೇಕು.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಜಂಟಿ ನಿರ್ದೇಶಕರು ತೋಟಗಾರಿಕೆ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Share this