ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದ ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 30 : ರಾಜ್ಯ ಸರ್ಕಾರ ಪ್ರಕಟಿಸಿರುವ ರಾಜ್ಯ ಮಟ್ಟದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿರುವ ವಿಜಯಪುರ ಜಿಲ್ಲೆಯ ಮೂವರು ಸಾಧಕರಿಗೆ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅಭಿನಂದಿಸಿದ್ದಾರೆ.
ವಿಜಯಪುರ ಜಿಲ್ಲೆಯ ಮಕ್ಕಳ ಸಾಹಿತ್ಯದಲ್ಲಿ ಅಪಾರ ಕೃಷಿ ಮಾಡಿರುವ ಹ.ಮ.ಪೂಜಾರ, ರಂಗಭೂಮಿಗೆ ವಿಶಿಷ್ಟ ಕೊಡುಗೆ ನೀಡಿರುವ ರಂಗಕರ್ಮಿ ಎಲ್.ಬಿ.ಶೇಖ್ ಮಾಸ್ತರ ಹಾಗೂ ಜಾನಪದ ಕ್ಷೇತ್ರದ ಎಸ್.ಡಿ.ಧನಗೊಂಡ ಇವರು ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗುವ ಮೂಲಕ ವಿಜಯಪುರ ಜಿಲ್ಲೆಗೆ ಕೀರ್ತಿ ತಂದಿದ್ದು, ಇದಕ್ಕಾಗಿ ಮೂವರು ಸಾಧಕರಿಗೆ ಹಾರ್ದಿಕ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಕನ್ನಡ ನಾಡಿಗೆ ತಮ್ಮಲ್ಲಿರುವ ಅಪಾರ ಪ್ರತಿಭೆಯ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವರಾದ ಶಿವರಾಜ ತಂಗಡಗಿ ಅವರನ್ನು ಧನ್ಯವಾದಗಳನ್ನು ತಿಳಿಸಿದ್ದಾರೆ.

Share this