ಸಪ್ತಸಾಗರ ವಾರ್ತೆ, ವಿಜಯಪುರ, ಅ. 30
ಭಾರತದ ಮಾಜಿ ಗೃಹ ಮಂತ್ರಿ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ನಿಮಿತ್ತ ರಾಷ್ಟ್ರದ ಸ್ವಾತಂತ್ರ್ಯ, ಐಕ್ಯತೆ ಮತ್ತು ಭದ್ರತೆಯನ್ನು ಬಲಪಡಿಸುವ ಉದ್ದೇಶದೊಂದಿಗೆ ವಿಜಯಪುರ ಜಿಲ್ಲಾ ಪೊಲೀಸ್ ವತಿಯಿಂದ ಅ.31 ರಂದು “ರಾಷ್ಟ್ರೀಯ ಏಕತಾ ದಿನ” ವನ್ನಾಗಿ ಆಚರಿಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ತಿಳಿಸಿದ್ದಾರೆ.
ಈ ಪ್ರಯುಕ್ತ ಅ. 31 ರಂದು ಮುಂಜಾನೆ 7 ಗಂಟೆಗೆ ವಿಜಯಪುರ ಜಿಲ್ಲಾ ಪೊಲೀಸ್ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು, ಐ.ಆರ್.ಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು, ವಿವಿಧ ಶಾಲೆಗಳ ಮಕ್ಕಳೊಂದಿಗೆ “ಏಕತಾ ಓಟ”ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಏಕತಾ ಓಟವನ್ನು ಡಾ. ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಿಂದ ಪ್ರಾರಂಭಿಸಿ, ಗಾಂಧಿಚೌಕ ಸರ್ಕಲ್, ಡಾ. ಬಿ.ಆರ್.ಅಂಬೇಡ್ಕರ್ ಸರ್ಕಲ್ ಮೂಲಕ ಬಂದು ಗೋಲ್ ಗುಂಬಜ್ ಆವರಣದಲ್ಲಿ ಮುಕ್ತಾಯಗೊಳಿಸಲಾಗುವುದು. ಸಾಮೂಹಿಕವಾಗಿ “ರಾಷ್ಟ್ರೀಯ ಏಕತಾ ದಿನಾಚರಣೆ” ಯ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
Editor
Rudrappa B Asangi
Editor
Managing Editor
Chetan Asangi
Managing Editor


