ಸಚಿವ ರಾಮಲಿಂಗಾರೆಡ್ಡಿ ಅವರಿಂದ ವೃಕ್ಷತ್ಥಾನ ಹೆರಿಟೇಜ್ ರನ್ ಪೋಸ್ಟರ್ ಬಿಡುಗಡೆ

ಸಪ್ತಸಾಗರ ವಾರ್ತೆ, ವಿಜಯಪುರ,ಅ.31: ಸಾರಿಗೆ ಹಾಗೂ ಮುಜರಾಯಿ ಖಾತೆ ಸಚಿವ ರಾಮಲಿಂಗಾ ರೆಡ್ಡಿ ಅವರು ಶುಕ್ರವಾರ ವಿಜಯಪುರ ನಗರದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಗಳ ಕಚೇರಿಯಲ್ಲಿ ಡಿಸೆಂಬರ್ 07ರಂದು ಐತಿಹಾಸಿಕ ಸ್ಮಾರಕಗಳ ರಕ್ಷಣೆ, ಹಸರೀಕರಣಕ್ಕಾಗಿ, ಸ್ವಚ್ಛತೆಗಾಗಿ ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ವೃಕ್ಷೋತ್ಥಾನ ಹೆರಿಟೇಜ್ ರನ್ ಪೋಸ್ಟರ್‍ ಗಳನ್ನು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ, ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮದ ಅಧ್ಯಕ್ಷೆ ಕಾಂತಾ ನಾಯ್ಕ, ಸಾರಿಗೆ ಇಲಾಖೆ ಅಧಿಕಾರಿ ವಸೀಂಬಾಬಾ ಮುದ್ದೇಬಿಹಾಳ, ಕೆಕೆಆರ್‍ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ, ಜಿಲ್ಲಾ ಉಸ್ತುವಾರಿ ಸಚಿವರ ಸಾರ್ವಜನಿಕ ಸಂಪರ್ಕಾಧಿಕಾರಿ ಮಹಾಂತೇಶ ಬಿರಾದಾರ, ಕೋಟಿ ವೃಕ್ಷ ಅಭಿಯಾನ ಪ್ರತಿಷ್ಠಾನದ ಮುರುಗೇಶ ಪಟ್ಟಣಶೆಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Share this