ನ. 12ರಂದು ಏಕತಾ ನಡಿಗೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 4:
ಭಾರತ ಸರ್ಕಾರದ ಮೇರಾ ಯುವ ಭಾರತ (ಮೈ ಭಾರತ), ಕೇಂದ್ರ ಸಂವಹನ ಇಲಾಖೆ, ಎನ್ ಎಸ್ ಎಸ್ ಜಿಲ್ಲಾ ಘಟಕ, ಭಾರತ ಸೇವಾ ದಳ ವಿಜಯಪುರ ವತಿಯಿಂದ ಮಾಜಿ ಉಪಪ್ರಧಾನಮಂತ್ರಿ ಮತ್ತು ಗೃಹ ಸಚಿವರಾದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮಜಯಂತಿ ಅಂಗವಾಗಿ ರಾಷ್ಟ್ರೀಯ ಏಕತಾ ದಿನವನ್ನು ಜಿಲ್ಲೆಯಲ್ಲಿ ಆಚರಿಸಲಾಗುವುದು ಎಂದು ಸಂಸದ ರಮೇಶ ಜಿಗಜಿಣಗಿ ಅವರು ತಿಳಿಸಿದ್ದಾರೆ.
ವಿಜಯಪುರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನವೆಂಬರ್ 12ರಂದು ಏಕತಾ ನಡಿಗೆ, ಯೂನಿಟಿ ಮಾರ್ಚ್
ನಡೆಸಲಾಗುವುದು ಎಂದು ತಿಳಿಸಿದರು. ನಗರದ ವಿವಿಧ ಕಾಲೇಜುಗಳಿಂದ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಏಕತಾ ನಡಿಗೆಯಲ್ಲಿ ಭಾಗವಹಿಸಲಿದ್ದಾರೆ.
ನಗರದ ಶಿವಾಜಿ ವೃತ್ತದಿಂದ ಆರಂಭವಾಗಿ ಕಂದಗಲ್ಲ ಹನುಮಂತರಾಯ ರಂಗ ಮಂದಿರದಲ್ಲಿ ಸಮಾಪನಗೊಳ್ಳಲಿದೆ. ನಂತರ ರಂಗ ಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದರು. ರಾಷ್ಟ್ರೀಯ ಏಕತಾ ದಿನದ ಪ್ರತಿಜ್ಞಾ ವಿಧಿ ಸ್ವೀಕಾರ, ಸಂಪನ್ಮೂಲ ವ್ಯಕ್ತಿಗಳಿಂದ ಭಾಷಣ, ಸಾಂಸ್ಕೃತಿಕ ಕಾರ್ಯಕ್ರಮಗಳು, ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ ಎಂದು ಸಂಸದರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಯುವ ಅಧಿಕಾರಿ ಗೌತಮ ರೆಡ್ಡಿ, ಸಂವಹನ ಇಲಾಖೆಯ ಸಿ.ಕೆ. ಸುರೇಶ, ವಿಜಯ ಜೋಶಿ, ಸಂದೀಪ ಪಾಟೀಲ್
ಶ್ರೀಧರ ಬಿಜ್ಜರಗಿ ಉಪಸ್ಥಿತರಿದ್ದರು.

Share this