11ರಂದು ವೀರ ವನಿತೆ ಒನಕೆ ಓಬವ್ವ ಜಯಂತಿ

ಸಪ್ತಸಾಗರ ವಾರ್ತೆ,ವಿಜಯಪುರ ನ.10: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದಲ್ಲಿ ನವೆಂಬರ್ 11 ರಂದು ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 9.30ಕ್ಕೆ ವೀರವನಿಗೆ ಒನಕೆ ಓಬವ್ವ ಭಾವಚಿತ್ರದ ಮೆರವಣಿಗೆಯು ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಚಾಲನೆಗೊಳ್ಳಲಿದೆ. ಬೆಳಿಗ್ಗೆ 10.30ಕ್ಕೆ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ ಅವರು ಗೌರವ ಉಪಸ್ಥಿತರಿರಲಿದ್ದಾರೆ.
ನಗರದ ಶಾಸಕ ಬಸನಗೌಡ ಪಾಟೀಲ್ ಅವರು ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ರವಿಕುಮಾರ ಎನ್, ಶಾಸಕರು ಆದ ಹಾಗೂ ನವದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ-2 ಪ್ರಕಾಶ ಬಿ.ಹುಕ್ಕೇರಿ, ಶಾಸಕರಾದ ಹಾಗೂ ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷ ಸಿ.ಎಸ್. ನಾಡಗೌಡ, ಸಂಸದರಾದ ರಮೇಶ ಜಿಗಜಿಣಗಿ, ಸುಧಾ ಮೂರ್ತಿ, ಶಾಸಕರಾದ ಯಶವಂತರಾಯಗೌಡ ಪಾಟೀಲ, ಹನಮಂತ ನಿರಾಣಿ, ಸುನೀಲಗೌಡ ಪಾಟೀಲ, ಪಿ.ಎಚ್.ಪೂಜಾರಿ, ವಿಠ್ಠಲ ಧೋಂಡಿಬಾ ಕಟಕಧೋಂಡ, ಭೀಮನಗೌಡ (ರಾಜುಗೌಡ) ಬಸನಗೌಡ ಪಾಟೀಲ, ಅಶೋಕ ಮಲ್ಲಪ್ಪ ಮನಗೂಳಿ, ಕೇಶವ ಪ್ರಸಾದ ಎಸ್, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯ್ಕ, ಧಾರವಾಡದ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಬಿ.ಎಸ್.ಕವಲಗಿ, ಮಹಾನಗರ ಪಾಲಿಕೆಯ ಮೇಯರ್ ಮಡಿವಾಳಪ್ಪ ಕರಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕನಾನ್ ಮುಶ್ರೀಫ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಇಲಿಯಾಸ ಬೋರಾಮಣಿ ಭಾಗವಹಿಸಲಿದ್ದಾರೆ.
ಉಜ್ವಲಾ ಸರನಾಡಗೌಡ ವಿಶೇಷ ಉಪನ್ಯಾಸ ನೀಡಲಿದ್ದು, ಕುಮಾರಿ ವೈಷ್ಣವಿ ನಾಯ್ಕೋಡಿ ಮತ್ತು ತಂಡ ವೀರವನಿತೆ ಒನಕೆ ಓಬವ್ವ ಕುರಿತು ನೃತ್ಯ ರೂಪಕ ಪ್ರದರ್ಶಿಸಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this