ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ ವಿಭಾಗಕ್ಕೆಜಮಖಂಡಿ ನೇಮಕ

ಸಪ್ತಸಾಗರ ವಾರ್ತೆ, ವಿಜಯಪುರ, ನ.19:
ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ (ಐ.ಎನ್.ಟಿ.ಯು.ಸಿ.) ಕಾಂಗ್ರೆಸ್ ವಿಭಾಗದ ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಅಬ್ದುಲಪೀರಾ ರಜಾಕಸಾಬ ಜಮಖಂಡಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಆದೇಶಿಸಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ಹಾಗೂ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ ಅವರ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ್ ಅವರ ಹಾಗೂ ಅಬ್ದುಲ್ ಹಮೀದ್ ಮುಶ್ರೀಫ್ ಅವರ ಆದೇಶದ ಮೇರೆಗೆ ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ (ಐ.ಎನ್.ಟಿ.ಯು.ಸಿ.) ಕಾಂಗ್ರೆಸ್ ವಿಭಾಗದ ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಅಬ್ದುಲಪೀರಾ ರಜಾಕಸಾಬ ಜಮಖಂಡಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಆದೇಶಿಸಿದೆ. ವಿಜಯಪುರ ಜಿಲ್ಲೆಯಲ್ಲಿ ಐ.ಎನ್.ಟಿ.ಯು.ಸಿ. ಕಾಂಗ್ರೆಸ್ ಪಕ್ಷದ ವಿಜಯಪುರ ಜಿಲ್ಲೆಯಲ್ಲಿ ಪಕ್ಷದ ಪದಾಧಿಕಾರಿಗಳ ನೇಮಕ ಮಾಡಿ ಪಕ್ಷದ ಸಂಘಟನೆ ಬಲಪಡಿಸಿ ಜಿಲ್ಲೆಯಲ್ಲಿ ಪಕ್ಷ ಅಧಿಕಾರಕ್ಕೆ ತರಲು ಶ್ರಮಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Share this