ನ.28ರಿಂದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ನ.24: ವಿಜಯಪುರ ಜಿಲ್ಲಾ ಪೊಲೀಸ್ ವತಿಯಿಂದ ನವೆಂಬರ್ 28ರಿಂದ 30ರವರೆಗೆ ನಗರದ ಸೋಲಾಪುರ ರಸ್ತೆಯ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ.
ನ.28ರಂದು ಬೆಳಿಗ್ಗೆ 8 ಗಂಟೆಗೆ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಜರುಗಲಿದ್ದು, ಜಿಲ್ಲಾಧಿಕಾರಿಗಳಾದ ಡಾ.ಆನಂದ.ಕೆ ಅವರು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಭಾಗವಹಿಸಲಿದ್ದಾರೆ.
ನ.30ರಂದು ಸಂಜೆ 4 ಗಂಟೆಗೆ ನಡೆಯುವ ಮುಕ್ತಾಯ ಸಮಾರಂಭದಲ್ಲಿ ಬೆಳಗಾವಿ ಉತ್ತರ ವಲಯದ ಆರಕ್ಷಕ ಮಹಾನಿರೀಕ್ಷಕರಾದ ಚೇತನಸಿಂಗ್ ರಾಥೋರ ಅವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Share this