ನ.28ರಂದು ವಿಕಲಚೇತನರ ಕುಂದು ಕೊರತೆ ಸಭೆ

ಸಪ್ತಸಾಗರ ವಾರ್ತೆ, ವಿಜಯಪುರ ನ.26:
ವಿಕಲಚೇತನರ ಜಿಲ್ಲಾ ಮಟ್ಟದ ಕುಂದು-ಕೊರತೆ ಸಭೆಯನ್ನು ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 28ರ ಬೆಳಿಗ್ಗೆ 11ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರು ಹಾಗೂ ವಿಕಲಚೇತನರು ಸಭೆಗೆ ಹಾಜರಾಗುವಂತೆ ಕೋರಲಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕನಕದಾಸ ಬಡಾವಣೆ, ಜಿಲ್ಲಾ ಪಂಚಾಯತಿ ಆವರಣ, ವಿಜಯಪುರ ಇವರನ್ನು ಅಥವಾ ದೂರವಾಣಿ ಸಂಖ್ಯೆ 08352-796060 ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this