ಸಪ್ತಸಾಗರ ವಾರ್ತೆ, ವಿಜಯಪುರ, ನ. 30:
74 ದಿನ ಪೂರೈಸಿದ ಸರಕಾರಿ ವೈದ್ಯಕೀಯ ಕಾಲೇಜಿಗಾಗಿ ನಡೆಯುತ್ತಿರುವ ಹೋರಾಟವು ನಾಳೆ 75 ನೇ ದಿನಕ್ಕೆ ಕಾಲಿಡುತ್ತಿದೆ. ರಾಜ್ಯ ಸರ್ಕಾರ ವಿಜಯಪುರ ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವಲ್ಲಿ ಎಸಗಿರುವ ದ್ರೋಹವನ್ನು ಖಂಡಿಸಿ ನಾಳೆ ಬೆಳಿಗ್ಗೆ 11 ಗಂಟೆಗೆ ನಗರದ ಶಿವಾಜಿ ವೃತ್ತದಿಂದ ಗಾಂಧಿವೃತ್ತದ ಮಾರ್ಗವಾಗಿ ಅಂಬೇಡ್ಕರ್ ವೃತ್ತದವರೆಗೆ ಜನಗಳ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ.
ವಿಜಯಪುರ ಜಿಲ್ಲೆಯ ವಿವಿಧ ತಾಲ್ಲೂಕು ಗಳಿಂದ 20000 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿ, ಯುವಜನ, ಮಹಿಳಾ, ಕೃಷಿ ಕಾರ್ಮಿಕರು, ರೈತರು, ನಾಗರಿಕರು ಮೆರವಣಿಗೆಯಲ್ಲಿ ಭಾಗವಹಿಸಲಿದ್ದು ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯನ್ನು ಬಾರಿಸಲಿದ್ದಾರೆ.
ವಿವಿಧ ಚಳವಳಿಗಳನ್ನು ಮಾಡಿದರೂ ಸರ್ಕಾರ ವಿಜಯಪುರ ಜಿಲ್ಲೆಗೆ ಅನ್ಯಾಯವೆಸಗುತ್ತಿರುವುದನ್ನು ಖಂಡಿಸಿ ವಿಜಯಪುರದ ನಾಗರಿಕರು ಬೀದಿಗಿಳಿಯಲಿದ್ದಾರೆ. ವಿಜಯಪುರ ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜಿಗಾಗಿ ನಡೆಯುತ್ತಿರುವ ಈ ಹೋರಾಟಕ್ಕೆ ವಿಜಯಪುರ ಎಲ್ಲಾ ನಾಗರಿಕರು ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸರ್ಕಾರವನ್ನು ಬಡಿದೆಬ್ಬಿಸುವ ಕೆಲಸವನ್ನು ಮಾಡಬೇಕಾಗಿದೆ. ನಂತರ ಅಂಬೇಡ್ಕರ್ ವೃತ್ತದಲ್ಲಿ ಬಹಿರಂಗ ಸಭೆಯನ್ನು ಉದ್ದೇಶಿಸಿ ವಿವಿಧ ಸಂಘಟನೆಗಳ ನಾಯಕರು ಹಾಗೂ ಹೋರಾಟ ಸಮಿತಿಯ ಸದಸ್ಯರು ಮಾತನಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಮೆಡಿಕಲ್ ಕಾಲೇಜ್ ಹೋರಾಟ: ನಾಳೆ ಬೃಹತ್ ಪ್ರತಿಭಟನಾ ಮೆರವಣಿಗೆ


