ಡಿ.04 ರಂದು ಬಾಲ್ಯವಿವಾಹ ಹಾಗೂ ಪೋಕ್ಸ್‌ ಕಾಯ್ದೆ ಹಾಗೂ ಮಕ್ಕಳ‌ ಸಂರಕ್ಷಣಾ ಕಾಯ್ದೆಗಳ ಕುರಿತ ಕಾರ್ಯಾಗಾರ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.4:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಜಿಲ್ಲಾ ಮಕ್ಕಳ ರಕ್ಷಣಾ ಘಟಕ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಪೊಲೀಸ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ,ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಡಿಸೆಂಬರ್ 4ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕಂದಗಲ್ ಶ್ರೀ ಹುನಮಂತರಾಯ ರಂಗಮಂದಿರದಲ್ಲಿ ಬಾಲ್ಯ ವಿವಾಹ-ಫೋಕ್ಸೊ ಕಾಯ್ದೆ ಹಾಗೂ ಮಕ್ಕಳ ಸಂರಕ್ಷಣಾ ಕಾಯ್ದೆಗಳ ಕುರಿತ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಾಗಾರಕ್ಕೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಪ್ರೌಢ ಶಾಲಾ ವಿಭಾಗ, ಪದವಿ ಪೂರ್ವ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಾಂಶುಪಾಲರು,‌ಮುಖ್ಯೋಪಾಧ್ಯಾಯರು ಹಾಗೂ ವಾರ್ಡನ್ ಅವರು ವಿದ್ಯಾರ್ಥಿಗಳೊಂದಿಗೆ ‌ಉಪಸ್ಥಿತರಿರುವಂತೆಯೂ
ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಈ ಕಾರ್ಯಾಗಾರಕ್ಕೆ ಹಾಜರಾಗುವಂತೆ‌ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಅವರು ಪ್ರಕಟಣೆಯಲ್ಲಿ‌ ಕೋರಿದ್ದಾರೆ.

Share this