ಮಹಿಳಾ ವಿವಿಯಲ್ಲಿ “ಡಿಜಿಟಲ್ ಸುರಕ್ಷತೆ” ಮತ್ತು “ಸೈಬರ್ ಜಾಗೃತಿ” ಕಾರ್ಯಾಗಾರ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 4: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗ ಹಾಗೂ ಯು.ಜಿ ಬ್ಲಾಕ್ ವತಿಯಿಂದ ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಣ ಅಭಿಯಾನ, ಕೇಂದ್ರ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯ, ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಸಹಯೋಗದಿಂದ ಇದೇ ಡಿ. ೫ ರಂದು “ಡಿಜಿಟಲ್ ಸುರಕ್ಷತೆ” ಮತ್ತು “ಸೈಬರ್ ಜಾಗೃತಿ” ಕುರಿತು ಒಂದು ದಿನದ ಉಚಿತ ತರಬೇತಿ ಕಾರ್ಯಾಗಾರವನ್ನು ಕನ್ನಡ ಸಭಾಭವನದಲ್ಲಿ ಆಯೋಜಿಸಲಾಗಿದೆ.
ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಬಿ. ಕೋರಿಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ. ಓಂಕಾರ ಕಾಕಡೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಸೈಬರ್ ಕಮಾಂಡ್ ಕೇಂದ್ರ, ವಿಶೇಷ ಕೋಶದ ಪೊಲೀಸ್ ವರಿಷ್ಠಾಧಿಕಾರಿ ಸವಿತಾ ಶ್ರೀನಿವಾಸ್, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್.ಲಕ್ಕಣ್ಣವರ ಮತ್ತು ಯುಜಿ ಬ್ಲಾಕ್ ವಿಶೇಷಾಧಿಕಾರಿ ಪ್ರೊ. ಸಕ್ಪಾಲ್ ಹೂವಣ್ಣ, ಹಾಗೂ ಹಿರಿಯ ನೋಡಲ್ ಅಧಿಕಾರಿ ಪ್ರೊ.ಜಿ.ಬಿ. ಸೋನಾರ ಸಹಾಯಕ ಪ್ರಾಧ್ಯಾಪಕಿ ತಹಮೀನಾ ಕೋಲಾರ್, ಸಹಾಯಕ ನೋಡಲ್ ಅಧಿಕಾರಿ ಡಾ. ರೋಹಿನಿ ಭೂಸನೂರ್ಮಠ, ಉಪಸ್ಥಿತರಿರಲಿದ್ದಾರೆ ಎಂದು ಕಾರ್ಯಾಗಾರದ ಸಂಯೋಜಕ ಸಂದೀಪ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this