ಕರ್ನಾಟಕ ಬಾಲವಿಕಾಸ ಅಕಾಡೆಮಿ ಪ್ರಶಸ್ತಿ ಪ್ರದಾನ

ಸಪ್ತಸಾಗರ ವಾರ್ತೆ, ಸಿಂದಗಿ ಡಿ. 16: ಬೆಳಗಾವಿಯ ಸುವರ್ಣ ಸೌಧದಲ್ಲಿ ಕರ್ನಾಟಕ ಬಾಲವಿಕಾಸ ಅಕಾಡೆಮಿ ಮಂಗಳವಾರ ಹಮ್ಮಿಕೊಂಡ
ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ
ಅಕಾಡೆಮಿ ನೀಡುವ 2022–23 ನೇ ಸಾಲಿನ ‘ಮಕ್ಕಳ ಚಂದಿರ’, ಪ್ರಶಸ್ತಿಯನ್ನು ಸಿಂದಗಿ ಪಟ್ಟಣದ ಮಕ್ಕಳ ಸಾಹಿತಿಗಳಾದ ಹ.ಮ. ಪೂಜರ, ಎಸ್.ಎಸ್. ಸಾತಿಹಳ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಪ್ರಶಸ್ತಿ ನೀಡಿ ಪುರಸ್ಕಾರ ಮಾಡಿದರು. ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹಾಗೂ ಇಲಾಖೆ ಅಧಿಕಾರಿಗಳು ಇದ್ದರು. ಮಕ್ಕಳ ಚಂದಿರ ಪ್ರಶಸ್ತಿಯು 15 ಸಾವಿರ ರೂ. ನಗದು, ಸ್ಮರಣಿಕೆ ಒಳಗೊಂಡಿದೆ.

Share this