ನೂತನ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅಧಿಕಾರ ಸ್ವೀಕಾರ

ಸಪ್ತಸಾಗರ ವಾರ್ತೆ, ವಿಜಯಪುರ,ಡಿ.29: ನೂತನ ಅಪರ ಜಿಲ್ಲಾಧಿಕಾರಿಯಾಗಿ ಡಾ.ಔದ್ರಾಮ ಅವರು ಸೋಮವಾರ ಅಧಿಕಾರ ವಹಿಸಿಕೊಂಡರು.
ಡಾ.ಔದ್ರಾಮ ಅವರು 2004ನೇ ಬ್ಯಾಚಿನ ಕೆಎಎಸ್ ಅಧಿಕಾರಿಯಾಗಿದ್ದು, ಅವರು ಈ ಹಿಂದೆ ವಿಜಯಪುರ ಮಹಾನಗರ‌ ಪಾಲಿಕೆ ಆಯುಕ್ತರಾಗಿ, ಅಪರ ಜಿಲ್ಲಾಧಿಕಾರಿಯಾಗಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಹಾಗೂ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.

Share this