ಸಪ್ತಸಾಗರ ವಾರ್ತೆ, ವಿಜಯಪುರ,ಡಿ.31:
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2025-26ನೇ ಸಾಲಿನ ಸಾಮಾನ್ಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳನ್ನು
ಪ್ರೋತ್ಸಾಹಿಸಲು ಹಾಗೂ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗಾಗಿ ಹಾಗೂ ಚಿತ್ರಕಲೆ-ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿಗಳನ್ನು ಸೇವಾಸಿಂಧು www.sevasindhu.karnataka.gov.in ಮುಖಾಂತರ ಜನವರಿ 9ರೊಳಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ದೂರವಾಣಿ ಸಂಖ್ಯೆ: 08352 251261 ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಕಟಣೆ ತಿಳಿಸಿದೆ.
Editor
Rudrappa B Asangi
Editor
Managing Editor
Chetan Asangi
Managing Editor


