ಸಪ್ತಸಾಗರ ವಾರ್ತೆ,ವಿಜಯಪುರ, ಜ. 1: ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ದಶಮಾನೋತ್ಸವ ಹಾಗೂ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮದಲ್ಲಿ ಆದರ್ಶ ವಿದ್ಯಾರ್ಥಿ-ವಿದ್ಯಾರ್ಥಿನಿಯಾಗಿ ಆಯ್ಕೆಯಾದ ಶಾಲೆಯ 10 ನೇ ವರ್ಗದ ಕು. ಸಂದೀಪ ಹುಣಶ್ಯಾಳ ಮತ್ತು ಕು. ಸಾನಿಕಾ ಖನಿಮಣಿ ಅವರನ್ನು ಶಾಲೆಯ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಗೂಳಪ್ಪ ಪೂಜಾರಿ, ಶರಣಬಸು ಪೂಜಾರಿ, ಗ್ರಾಪಂ ಮಾಜಿ ಅಧ್ಯಕ್ಷ ಚಂದ್ರಶೇಖರ ಅರಕೇರಿ, ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾರದಾ ಗಿರಿಸಾಗರ, ಉಪಾಧ್ಯಕ್ಷ ಬಾಬು ಕತ್ನಳ್ಳಿ, ಜಿಲ್ಲಾ ಕಾನಿಪ ಅಧ್ಯಕ್ಷ ಅಶೋಕ ಯಡಳ್ಳಿ, ಉಪಾಧ್ಯಕ್ಷ ಶಶಿಕಾಂತ ಮೆಂಡೆಗಾರ, ಹಿರಿಯ ವರದಿಗಾರ ಶರಣು ಮಸಳಿ, ಸಂಸ್ಥೆಯ ಉಪಾಧ್ಯಕ್ಷೆ ಸುರೇಖಾ ಬಂಡೆ, ಕಾರ್ಯದರ್ಶಿ ಸುನಂದಾ ಹುಣಶ್ಯಾಳ, ಮುಖ್ಯ ಶಿಕ್ಷಕ ಸುರೇಶಗೌಡ ಬಿರಾದಾರ, ಶಿಕ್ಷಕ ಸಾಹಿತಿ ಸಂತೋಷ ಬಂಡೆ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ನಾಗಠಾಣ: ಆದರ್ಶ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ


