ಸಿದ್ದಾಪುರ ಅರಕೇರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 27:
ತಿಕೋಟಾ ತಾಲೂಕಿನ ಸಿದ್ದಾಪುರ ಅರಕೇರಿ ಗ್ರಾಮದ ಪ್ರೌಢಶಾಲೆಯಲ್ಲಿ ಸೋಮವಾರ ಗಣರಾಜ್ಯೋತ್ಸವ ಆಚರಿಸಲಾಯಿತು.
ಮಲ್ಲಿಕಾರ್ಜುನ ಸಕ್ರಿ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ವಿಠ್ಠಲ್ ಸಿಂಗ್ ರಜಪೂತ್ ಮಾತನಾಡಿ, ಬಲಿಷ್ಠ ಭಾರತ ನಿರ್ಮಾಣಕ್ಕೆ ನಮ್ಮ ಸಂವಿಧಾನ ಜಾತ್ಯತೀತ ವ್ಯವಸ್ಥೆಯನ್ನು ಹೊಂದಿದೆ. ನಾವೆಲ್ಲರೂ ಸಹ ಬಾಳ್ವೆ ಸಹಕಾರದಿಂದ ಅಭಿವೃದ್ಧಿಗೆ ಕೈಜೋಡಿಸಬೇಕು. ಆಗಲೇ ಪ್ರಜಾಪ್ರಭುತ್ವಕ್ಕೆ ಒಂದು ಅರ್ಥ ಬರುತ್ತದೆ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಭಾರತ ಎಂದೆಂದಿಗೂ ಬಲಿಷ್ಠವಾಗಿರಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರಾದ ಅಶೋಕ ದಳವಾಯಿ ಅಧ್ಯಕ್ಷತೆ ವಹಿಸಿದ್ದರು. ಎಸ್.ಎಸ್. ಜತ್ತಿ ಗುರುಗಳು ಹಾಗೂ ಗುರುಮಾತೆಯರು, ಗ್ರಾಮ ಪಂಚಾಯತಿ ಸದಸ್ಯರು, ಗ್ರಾಮ ಸಹಕಾರ ಸಂಘದ ಸದಸ್ಯರು ಗ್ಯಾರಂಟಿ ಸಮಿತಿ ಸದಸ್ಯರು, ಗ್ರಾಮದ ಮುದ್ದು ಮಕ್ಕಳು ಯುವಕರು ಪಾಲ್ಗೊಂಡಿದ್ದರು.

Share this