ಸಪ್ತಸಾಗರ ವಾರ್ತೆ, ವಿಜಯಪುರ, ಜ. 30:
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಹಾಗೂ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಇವರ ಸಹಯೋಗದಲ್ಲಿ ಫೆ.2ರಂದು ಬೆಳಿಗ್ಗೆ 9ರಿಂದ ಸಂಜೆ 5ರವರೆಗೆ ಯುವ ಸಮೃದ್ಧಿ ಸಮ್ಮೇಳನ- ವಿಜಯಪುರ ಉದ್ಯೋಗ ಮೇಳವನ್ನು ದರಬಾರ ಹೈಸ್ಕೂಲ್ ಆವರಣದಲ್ಲಿ ಆಯೋಜಿಸಲಾಗಿದೆ.
ನಗರದ ಹೊಸ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ
ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯ್ಕ ಅವರು ಉದ್ಯೋಗ ಮೇಳದ ಕುರಿತು ವಿವರ ಹಂಚಿಕೊಂಡರು.
ಈ ಪತ್ರಿಕಾಗೋಷ್ಠಿಯಲ್ಲಿ ಪಾಲಿಕೆ ಸದಸ್ಯೆ ಆರತಿ ಶಹಾಪೂರ, ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ,ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರುದ್ದಿನ ಸೌದಾಗರ್, ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಮಹೇಶ ಮಾಳವಾಡಕರ, ಬಾಗಲಕೋಟೆ ಜಿಲ್ಲಾ ಕೌಶಲ್ಯಾಧಿಕಾರಿ ಗುರುಪಾದಯ್ಯ ಹಿರೇಮಠ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಕೆ.ಹೊಸಮನಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
ಫೆ. 2ರಂದು ವಿಜಯಪುರದಲ್ಲಿ ಬೃಹತ್ ಉದ್ಯೋಗ ಮೇಳ


