ಕಲ್ಲು, ಚಪ್ಪಲಿ ಎಸೆದವರನ್ನು ಗೂಂಡಾ ಕಾಯ್ದೆಯಲ್ಲಿ ಬಂಧಿಸಿ ಜೈಲಿಗಟ್ಟಿ; ಶಾಸಕ ಯತ್ನಾಳ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 20:
ಬಾಗಲಕೋಟೆಯಲ್ಲಿ ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಮುಸಲ್ಮಾನರು ಕಲ್ಲು, ಚಪ್ಪಲಿ ತೂರಿ ಅಶಾಂತಿ ಸೃಷ್ಟಿಸಿರುವುದು ಖಂಡನೀಯ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಕಿಡಿಕಾರಿದ್ದಾರೆ.
ಮೊಘಲರ ಹುಟ್ಟಡಗಿಸಿದ ವೀರ ಪರಾಕ್ರಮಿ, ಅಪ್ರತಿಮ ವೀರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನೇ ಗುರಿಯಾಗಿಸಿಕೊಂಡು ಮಸೀದಿಗಳಿಂದ ಕಲ್ಲು, ಚಪ್ಪಲಿಗಳನ್ನು ಎಸೆದವರ ಮೇಲೆ ಪೊಲೀಸರು ಗೂಂಡಾ ಕಾಯ್ದೆಯಲ್ಲಿ ಬಂಧಿಸಿ ಜೈಲಿಗಟ್ಟಬೇಕು.
ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಸೇರಿದಂತೆ ಈ ಪ್ರಚೋದಿತ ಗಲಭೆಯಲ್ಲಿ ಗಾಯಗೊಂಡವರಿಗೆ ಮಸೀದಿಯ ಆಡಳಿತ ಮಂಡಳಿಯೇ ಜವಾಬ್ದಾರಿ ತೆಗೆದುಕೊಂಡು ವೈದ್ಯಕೀಯ ವೆಚ್ಚ ಹಾಗೂ ಪರಿಹಾರವನ್ನು ನೀಡಬೇಕು.
ಮತ್ತೊಮ್ಮೆ, ಮಸೀದಿಯಿಂದ ಕಲ್ಲು ತೋರುವ ಘಟನೆಯಾದರೆ ಮಸೀದಿಯ ವಿದ್ಯುತ್ ಹಾಗೂ ನೀರಿನ ಸರಬರಾಜನ್ನು ಸರಕಾರ ಸ್ಥಗಿತಗೊಳಿಸಿ ತಕ್ಕ ಪಾಠ ಕಲಿಸಲಿ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಟ್ವಿಟ್ ಮಾಡಿದ್ದಾರೆ.

Share this