ಫೆ.21ರಂದು 15 ಗ್ರಾಮಗಳಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್:ಡಿಸಿ ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ.20:
ವಿವಿಧ ಸಾಮಾಜಿಕ ಭದ್ರತೆ ಯೋಜನೆಗಳನ್ನು ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲೆಯ ಹೋಬಳಿ ಮಟ್ಟದಲ್ಲಿ ಪಿಂಚಣಿ ಅದಾಲತ್ ಫೆ.21ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲೆಯ ವಿವಿಧ 15 ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆನಂದ.ಕೆ ಅವರು ತಿಳಿಸಿದ್ದಾರೆ.
ವಿಜಯಪುರ ಉಪ ವಿಭಾಗಾಧಿಕಾರಿಗಳು ಬಸವನ ಬಾಗೇವಾಡಿ ತಾಲೂಕಿನ ಮಣ್ಣೂರ ಗ್ರಾಮದ ಶ್ರೀ ರಾಚೋಟೇಶ್ವರ ದೇವಸ್ಥಾನದಲ್ಲಿ,ಇಂಡಿ ಉಪವಿಭಾಗಾಧಿಕಾರಿಗಳು ಚಡಚಣ ತಾಲೂಕಿನ ಜಿಗಜೀವಣಗಿ ಗ್ರಾಮದ ಶ್ರೀ ಕವಡೇಶ್ವರ ಮಠದ ದೇವಸ್ಥಾನದಲ್ಲಿ, ವಿಜಯಪುರ ಗ್ರೇಡ್-2 ತಹಶೀಲ್ದಾರ ಅವರು ಹೊನ್ನಳ್ಳಿ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಸಮುದಾಯ ಭವನದಲ್ಲಿ, ತಿಕೋಟಾ ಗ್ರೇಡ್-2 ತಹಶೀಲ್ದಾರ ಅವರು ಹಂಚಿನಾಳ ಪಿ.ಎಚ್ ಗ್ರಾಮದ ಸಮುದಾಯ ಭವನದಲ್ಲಿ, ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ಬಬಲೇಶ್ವರ ಗ್ರೇಡ್-2 ತಹಶೀಲ್ದಾರ ಅವರು ಕಾರಜೋಳ ಗ್ರಾಮದ ಗ್ರಾಮ ಪಂಚಾಯತಿ‌ ಕಾರ್ಯಾಲಯದಲ್ಲಿ, ಬಸವನಬಾಗೇವಾಡಿ ಗ್ರೇಡ್-2 ತಹಶೀಲ್ದಾರ ಅವರು ಸಂಕನಾಳ ಗ್ರಾಮದ ಶ್ರೀ ಹನುಮಾನ ದೇವಸ್ಥಾನದಲ್ಲಿ, ನಿಡಗುಂದಿ ತಹಶೀಲ್ದಾರ ಅವರು ಅಬ್ಬಿಹಾಳ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದಲ್ಲಿ, ಕೊಲ್ದಾರ ತಹಶೀಲ್ದಾರ ಅವರು ತಡಲಗಿ ಗ್ರಾಮದ ಡಾ. ಅಂಬೇಡ್ಕರ್ ಸಮುದಾಯ ಭವನದಲ್ಲಿ, ಮುದ್ದೇಬಿಹಾಳ ಗ್ರೇಡ್-2 ತಹಶೀಲ್ದಾರ ಅವರು ಬಳವಾಟ ಗ್ರಾಮದ ಶ್ರೀ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ತಾಳಿಕೋಟೆ ಗ್ರೇಡ್-2 ತಹಶೀಲ್ದಾರ ಅವರು ಬೆಕಿನಾಳ ಗ್ರಾಮದ ಶ್ರೀ ಮಾರುತಿ ದೇವಸ್ಥಾನದಲ್ಲಿ, ಇಂಡಿ ಗ್ರೇಡ್-2 ತಹಶೀಲ್ದಾರ ಅವರು ಅಗಸನಾಳ ಗ್ರಾಮದ ಶ್ರೀ ಹನುಮಾನ ದೇವಸ್ಥಾನದಲ್ಲಿ, ಚಡಚಣ ತಹಶೀಲ್ದಾರ ಅವರು ತದ್ದೇವಾಡಿ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ,ಸಿಂದಗಿ ತಹಶೀಲ್ದಾರ ಅವರು ಹಡಗಿನಾಳ ಗ್ರಾಮದ ಸರಕಾರಿ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ,ದೇವರಹಿಪ್ಪರಗಿ ತಹಶೀಲ್ದಾರ ಅವರು ಇಂಗಳಗಿ ಗ್ರಾಮದ ಸರಕಾರಿ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಹಾಗೂ ಆಲಮೇಲ ತಹಶೀಲ್ದಾರ ಅವರು ದೇವಣಗಾಂವ ಗ್ರಾಮದ ಸರಕಾರಿ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ಅದಾಲತ್ ನಡೆಯುವ ಗ್ರಾಮಗಳಲ್ಲಿ ಸಾಮಾಜಿಕ ಭದ್ರತೆ ಯೋಜನೆಯಡಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳಿಗೆ ನೇರ ಹಣ ವರ್ಗಾವಣೆ ಮೂಲಕ ಪಿಂಚಣಿ ಪಾವತಿಸಲಾಗುತ್ತಿರುವುದರಿಂದ ಸಂಬಂಧಿಸಿದ ಬ್ಯಾಂಕ್-ಅಂಚೆ ಕಚೇರಿ ಅಧಿಕಾರಿಗಳು ಉಪಸ್ಥಿತರಿರುವರು. ಪಿಂಚಣಿ ಅದಾಲತ್‌ನಲ್ಲಿ ಪಿಂಚಣಿದಾರರ ಮಾಹಿತಿಗಳೊಂದಿಗೆ ಗ್ರಾಮದ ಲೆಕ್ಕಿಗರು, ಪಂಚಾಯತ್ ಕಾರ್ಯದರ್ಶಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಅಂಚೆ ಕಚೇರಿ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿರುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this