ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 26:
ರಾಜ್ಯ ಮಟ್ಟದ ಶೈಕ್ಷಣಿಕ ಮಹಾ ಸಮ್ಮೇಳನ, ಧನ್ಯತಾ ಸಮಾರಂಭ, ಸಂಘದ ಸುವರ್ಣ ಮಹೋತ್ಸವ ಹಾಗೂ ಗುರುವಂದನಾ ಸಮಾರಂಭ ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆ. 28ರಂದು ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾ ಅಧ್ಯಕ್ಷ ಅರ್ಜುನ ಲಮಾಣಿ ತಿಳಿಸಿದರು.
ಗುರುವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು,
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸುವರ್ಣ ಸಂಭ್ರಮ ಲೋಕಾರ್ಪಣೆ ಮಾಡಲಿದ್ದಾರೆ.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಿ ಅವರ ನೇತೃತ್ವದಲ್ಲಿ ಫೆ. 28 ರಂದು ಸಮಾರಂಭ ಜರುಗಲಿದೆ ಎಂದು ಹೇಳಿದರು.
ಸುವರ್ಣ ಸಂಭ್ರಮ ನಿಮಿತ್ತ ಉಚಿತ TAX E-FILING ಹಾಗೂ ಬಾಲ ಸಾಂತ್ವನ ನಿಧಿ ಯೋಜನೆ ಲೋಕಾರ್ಪಣೆ ಮಾಡಲಿದ್ದಾರೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರು ಭಾಗವಹಿಸಲಿದ್ದಾರೆ.
ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಗೃಹ ಸಚಿವ ಜಿ.ಪರಮೇಶ್ವರ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸಂಘದ ಹಲವು ಬೇಡಿಕೆಗಳನ್ನು ಈಡೇರಿಸಿದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಹಾಗೂ ಶಿಕ್ಷಣ ಇಲಾಖೆಯ ಹಲವು ಕ್ಯಾಬಿನೆಟ್ ದರ್ಜೆಯ ಸಚಿವರುಗಳಿಗೆ ಸನ್ಮಾನಿಸಿ ಗೌರವಿಸಲಾಗುವುದು.
ಇದೇ ಸಂದರ್ಭದಲ್ಲಿ ಶಿಕ್ಷಕರ ಹಲವಾರು ಬೇಡಿಕೆಗಳ ಕುರಿತು ಹಕ್ಕೋತ್ತಾಯ ಮಾಡಲಾಗುವುದು ಎಂದರು.
ನಮ್ಮ ಶಿಕ್ಷಕ ಸಂಘಟನೆಗೆ ಸಂಬಂಧವಿಲ್ಲದ ಕೆಲವು ವ್ಯಕ್ತಿಗಳು ಸಮ್ಮೇಳನ ಹಾಗೂ ಸಂಘದ ಕುರಿತು ಅಪಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ಯಾರು ಕಿವಿಗೊಡಬಾರದು. ಸಮ್ಮೇಳನ ಯಶಸ್ವಿಯಾಗಿ ಅದ್ಭುತವಾಗಿ ಮೂಡಿಬರಲಿದೆ. ಹಾಗೂ ಸಂಘದ ಚುನಾವಣೆಯು ಸಂಘದ ಬೈಲಾ ನಿಯಮ ಪ್ರಕಾರ ಸಕಾಲಕ್ಕೆ ಜರುಗಲಿದೆ ಈ ಕಾರ್ಯಕ್ರಮದಲ್ಲಿ ಜಿಲ್ಲೆಗೊಬ್ಬ ಸಾಧಕ ಶಿಕ್ಷಕರಿಗೆ “ಜ್ಯೋತಿಬಾ ಫುಲೆ” ಪ್ರಶಸ್ತಿ ಹಾಗೂ ಜಿಲ್ಲೆಗೊಬ್ಬ ಸಾಧಕಿ ಶಿಕ್ಷಕಿಯರಿಗೆ ” ಸಾವಿತ್ರಿಬಾಯಿ ಫುಲೆ” ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ವಿವರಿಸಿದರು
ಸಮ್ಮೇಳನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರು ಪಾಲ್ಗೊಳ್ಳಬೇಕೆಂದು ಎಂದು ಮನವಿ ಮಾಡಿಕೊಂಡರು.
ಅಲ್ಲಾಭಕ್ಷ ವಾಲಿಕಾರ, ಶರಣಬಸು ಬೇನೂರ, ಜಿ ಓ ಸಿ ಸಿ ಬ್ಯಾಂಕ್ ನಿರ್ದೇಶಕರಾದ ಹನುಮಂತ ಕೊಳಗಿ, ಜಿ ಓ ಸಿ ಸಿ ಬ್ಯಾಂಕ್ ನಿರ್ದೇಶಕರ ಅಶೋಕ ಚನ್ನಬಸು, ಬಬಲೇಶ್ವರ ತಾಲೂಕಿನ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಅಶೋಕ ಬೂದಿಹಾಳ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರು ಪದಾಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.


