ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಪುಸ್ತಕ ಇಲಾಖೆವೆಬ್ ಸೈಟಿನಲ್ಲಿ ಪ್ರಕಟ: ದಾಖಲೆ ಸಲ್ಲಿಸಲು ಅವಕಾಶ

ಸಪ್ತಸಾಗರ ವಾರ್ತೆ, ವಿಜಯಪುರ.ಮಾ.4: 2022ನೇ ಸಾಲಿನಲ್ಲಿ ಪ್ರಥಮ ಮುದ್ರಣಗೊಂಡ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಪುಸ್ತಕಗಳನ್ನು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಅಧಿಕೃತ dpl.karnataka.gov.in ವೆಬ್ ಸೈಟಿನಲ್ಲಿ ಮಾರ್ಚ್ 02ರಂದು ಪ್ರಕಟಿಸಲಾಗಿದೆ.
ಸಮಿತಿಯಿಂದ ಆಯ್ಕೆಯಾದ ಪುಸ್ತಕಗಳ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು ಹಾಗೂ ಪುಸ್ತಕ ಮಾರಾಟಗಾರರ ಪುಸ್ತಕಗಳ ಶೀರ್ಷಿಕೆ,ಲೇಖಕರ ಹೆಸರು,ಪ್ರಕಾಶಕರ ಹೆಸರು,ಮುಖಬೆಲೆ ಮತ್ತು ನಿಗದಿತ ಬೆಲೆಯಲ್ಲಿ ಹೆಚ್ಚು ಅಥವಾ ಕಡಿಮೆಯಾಗಿದ್ದಲ್ಲಿ, ಪುಸ್ತಕದ ಅಳತೆ, ಪುಟ ಸಂಖ್ಯೆ ಹಾಗೂ ಇತರೆ ಯಾವುದೇ ತಾಂತ್ರಿಕ ವ್ಯತ್ಯಾಸಗಳ ಮಾಹಿತಿಯನ್ನು ಅಗತ್ಯ ದಾಖಲೆಗಳೊಂದಿಗೆ ಮಾರ್ಚ್ 16ರ ಸಂಜೆ 5:30ರೊಳಗಾಗಿ ಆಯುಕ್ತರು,ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, ನಾಲ್ಕನೇ ಮಹಡಿ ಡಾ.ಅಂಬೇಡ್ಕರ್ ರಸ್ತೆ ಬೆಂಗಳೂರು-56001 ಇಲ್ಲಿಗೆ ಲಿಖಿತವಾಗಿ ಮನವಿಗಳನ್ನು ಸಲ್ಲಿಸಲು ಹಾಗೂ ಕೊನೆಯ ದಿನಾಂಕದ ನಂತರ ಸ್ವೀಕರಿಸುವ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ನಗರ ಕೇಂದ್ರ ಗ್ರಂಥಾಲಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this