ಸಪ್ತಸಾಗರ ವಾರ್ತೆ,ವಿಜಯಪುರ,ಮಾ.8:
ಜಿಲ್ಲಾಡಳಿತ,ಜಿಲ್ಲಾ ಪಂಚಾಯತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದಲ್ಲಿ ಮಾರ್ಚ್ 9ರಂದು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸಂಜೆ 4 ಗಂಟೆಗೆ ಭೀಮ ಗಾಯನ ಕಾರ್ಯಕ್ರಮ ನಡೆಯಲಿದೆ.
ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಜೀವನ ಸಾಧನೆ, ಸಮಾನತೆಯ ಹೋರಾಟ, ಅಸ್ಪೃಶ್ಯತೆ ನಿರ್ಮೂಲನೆ, ಸ್ತ್ರೀ ಸಮಾನತೆ ಕುರಿತ ಗೀತೆಗಳ ಗಾಯನ ನಡೆಯಲಿದೆ.
ಸಮಾನತೆಯ ಸ್ವರ ಸಂಭ್ರಮ ಭೀಮನ ಆದರ್ಶಗಳನ್ನು ಸ್ವರಗಳಲ್ಲಿ ಜೀವಂತಗೊಳಿಸುವ ಜಾಗೃತಿ, ಆತ್ಮಗೌರವ ಮತ್ತು ಸಮಾನತೆಯ ಸಂಗೀತ ಕಾರ್ಯಕ್ರಮವೇ ಭೀಮ ಗಾಯನವಾಗಿದೆ.
ಸಿದ್ಧಾರ್ಥ ಯುವ ಕ್ರೀಡಾ ಸಾಂಸ್ಕೃತಿಕ ಅಭಿವೃದ್ಧಿ ಸಂಘವು ಭೀಮ ಗಾಯನವನ್ನು ಪ್ರಸ್ತುತಪಡಿಸಲಿದೆ.
ಅಂಬೇಡ್ಕರ್ ಗೀತೆಗಳ ಈ ಮಹೋತ್ಸವಕ್ಕೆ ಎಲ್ಲ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ ಪ್ರಕಟಣೆಯಲ್ಲಿ ಕೋರಿದ್ದಾರೆ.
Editor
Rudrappa B Asangi
Editor
Managing Editor
Chetan Asangi
Managing Editor


