ಸಪ್ತಸಾಗರ ವಾರ್ತೆ,ವಿಜಯಪುರ ಮಾ.16:
ಜಿಲ್ಲೆಯ 137 ಪರೀಕ್ಷಾ ಕೇಂದ್ರಗಳಲ್ಲಿ ಮಾ.18 ರಿಂದ ಏಪ್ರಿಲ್ 02ರವರೆಗೆ ಎಸ್.ಎಸ್.ಎಲ್.ಸಿ.ಪರೀಕ್ಷೆ-1ಪರೀಕ್ಷೆಗಳು ಜರುಗಲಿದ್ದು, ಪಾರದರ್ಶಕ ಹಾಗೂ ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ಕಲಂ 163ರ ಪ್ರಕಾರ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ. ಪ್ರದೇಶದಲ್ಲಿ ಬೆಳಿಗ್ಗೆ 8:30 ಗಂಟೆಯಿಂದ ಪರೀಕ್ಷೆ ಮುಕ್ತಾಯವಾಗುವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕಾರ್ಯದಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಇತರರು ಮೊಬೈಲ್ ಫೋನ್ ತರುವುದು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ. ಕೇವಲ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಬೇಸಿಕ್ ಮೊಬೈಲ್ ಸೆಟ್‍ನ್ನು ಮಾತ್ರ ಬಳಸಬಹುದಾಗಿದೆ. ಪರೀಕ್ಷಾ ಕೇಂದ್ರದ 200 ಮೀಟರ್ ಪ್ರದೇಶದಲ್ಲಿರುವ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್ಗಳು, ಸೈಬರ್ ಕೆಫೆಗಳು, ಕೋಚಿಂಗ್ ಕೇಂದ್ರಗಳು ಪರೀಕ್ಷೆ ಮುಕ್ತಾಯವಾಗುವರೆಗೆ ತೆರೆಯದಂತೆ ಆದೇಶಿಸಲಾಗಿದೆ.
Editor
Rudrappa B Asangi
Editor
Managing Editor
Chetan Asangi
Managing Editor


