ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 21:
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನಾ ಕೋಶ, ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ಭಾರತ ಸರಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಸರಕಾರ, ಎನ್.ಎಸ್, ಎಸ್. ಪ್ರಾದೇಶಿಕ ನಿರ್ದೇಶನಾಲಯ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ‘ರಾಷ್ಟ್ರೀಯ ಸೇವಾ ಯೋಜನೆಯ ರಾಜ್ಯ ಮಟ್ಟದ ಯುವಜನೋತ್ಸವ-2026’ ಕಾರ್ಯಕ್ರಮವನ್ನು ಮಾ.23 ರಿಂದ 27 ರವರೆಗೆ ಮಹಿಳಾ ವಿವಿಯಲ್ಲಿ ಆಯೋಜಿಸಲಾಗಿದೆ.
ಮಾ 23 ರಂದು ನಡೆಯಲಿರುವ ಉದ್ಘಾಟನಾ ಸಮಾರಂಭವನ್ನು ನಾಗಠಾಣ ಕ್ಷೇತ್ರದ ಮಾಜಿ ಶಾಸಕ ರಾಜು ಆಲಗೂರ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಷ್ಟ್ರಪ್ರಶಸ್ತಿ ಪುರಸ್ಕೃತರ ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ಡಾ. ಜಾವಿದ ಜಮಾದಾರ, ಬೆಂಗಳೂರಿನ ರಾಷ್ಟ್ರೀಯ ಸೇವಾ ಯೋಜನಾ ಕೋಶದ ಪ್ರಾದೇಶಿಕ ನಿರ್ದೇಶಕ ಎಸ್. ಎಚ್. ಗಿರಿಧರ್ ಉಪಾಧ್ಯಾಯ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ್ ಪೋತದಾರ, ಕಾಂಗ್ರೆಸ್ ಮುಖಂಡ ಕೃಷ್ಣಾ ಕೆ.ಎಚ್, ರಾಷ್ಟ್ರೀಯ ಸೇವಾ ಯೋಜನಾ ಕೋಶದ ಯುವ ಅಧಿಕಾರಿ ಪಿ.ಎನ್.ಸಂತೋಷ ಹಾಗೂ ಸಿಂಡಿಕೇಟ್ ಮಾಜಿ ಸದಸ್ಯ ಆರ್.ಸಿ.ಪಾಟೀಲ ಭಾಗವಹಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್.ಲಕ್ಕಣ್ಣವರ ಹಾಗೂ ಆರ್ಥಿಕ ಅಧಿಕಾರಿ ರಾಮಣ್ಣ ಅಥಣಿ ಉಪಸ್ಥಿತರಿರಲಿದ್ದಾರೆ.
ದಮಾ.27ರಂದು ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ರಾಷ್ಟ್ರಪ್ರಶಸ್ತಿ ಪುರಸ್ಕೃತರ ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ಡಾ.ಜಾವಿದ ಜಮಾದಾರ, ರಾಜ್ಯ ಎನ್.ಎಸ್.ಎಸ್ ಅಧಿಕಾರಿ ಡಾ.ಪ್ರತಾಪ್ ಲಿಂಗಯ್ಯ, ಬೆಂಗಳೂರಿನ ಎನ್.ಎಸ್.ಎಸ್ ಪ್ರಾದೇಶಿಕ ಕೇಂದ್ರ, ಪ್ರಾದೇಶಿಕ ನಿರ್ದೇಶಕ ಎಸ್.ಎಚ್.ಗಿರಿಧರ್ ಉಪಾಧ್ಯಾಯ, ವಿಜಯಪುರ ಮಹಾನಗರ ಪಾಲಿಕೆಯ ಉಪ ಆಯುಕ್ತ ಮಹಾವೀರ ಬೊರಣ್ಣವರ ಹಾಗೂ ಕರ್ನಾಟಕ ರಾಜ್ಯ ಸರಕಾರಿ ಮಹಿಳಾ ನೌಕರರ ಸಂಘದ ರಾಜ್ಯಾಧ್ಯಕ್ಷೆ ಲತಾ ಬಿರಾದಾರ ಭಾಗವಹಿಸಲಿದ್ದಾರೆ.
ಅಧ್ಯಕ್ಷತೆಯನ್ನು ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್.ಲಕ್ಕಣ್ಣವರ ಹಾಗೂ ಆರ್ಥಿಕ ಅಧಿಕಾರಿ ರಾಮಣ್ಣ ಅಥಣಿ ಉಪಸ್ಥಿತರಿರಲಿದ್ದಾರೆ.
ಐದು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ವಿವಿಧ ವಿಷಯದ ಕುರಿತ ವಿಶೇಷ ಉಪನ್ಯಾಸಗಳು, ಗೋಷ್ಠಿಗಳು, ಪ್ರತಿ ದಿನ ಧ್ವಜಾರೋಹಣ, ಯೋಗ, ಧ್ಯಾನ, ಚಿಂತನೆ, ಶ್ರಮದಾನ, ಸಾಹಿತ್ಯಿಕ ರಸಪ್ರಶ್ನೆ ಕಾರ್ಯಕ್ರಮಗಳು ಹಾಗೂ ಮೌಲ್ಯಮಾಪನ ವರದಿ ತಯಾರಿಸುವಿಕೆ ಕಾರ್ಯಾಗಾರ ನಡೆಯಲಿದೆ ಎಂದು ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಹಾಗೂ ಎನ್ಎಸ್ಎಸ್ ಕಾರ್ಯಕ್ರಮ ಸಂಯೋಜಕ ಡಾ.ಪ್ರಕಾಶ ಸಣ್ಣಕ್ಕನವರ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಿಳಾ ವಿವಿಯಲ್ಲಿ ಮಾ.23ರಿಂದ 27ರವರೆಗೆ ರಾಷ್ಟ್ರೀಯ ಸೇವಾ ಯೋಜನೆಯ ರಾಜ್ಯ ಮಟ್ಟದ ಯುವಜನೋತ್ಸವ


