ಸಪ್ತಸಾಗರ ವಾರ್ತೆ,ವಿಜಯಪುರ, ಏ. 1:
ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ಮುಳವಾಡ ಏತ ನೀರಾವರಿ ವೃತ್ತ ಟಕ್ಕಳಕಿ ಅಡಿ ಬರುವ ಕಾಲುವೆ ಜಾಲಕ್ಕೆ 2025-26 ರ ಹಿಂಗಾರು ಹಂಗಾಮಿಗೆ ಕಾಲುವೆ ಜಾಲಕ್ಕೆ ನೀರು ಹರಿಸುವ ಅವಧಿಯನ್ನು ಏ.1 ರಿಂದ ಏ.7ರವರೆಗೆ ವಿಸ್ತರಿಸಲಾಗಿದೆ ಎಂದು
ಕೆಬಿಜೆಎನ್ನೆಲ್ ಮುಳವಾಡ ಏತ ನೀರಾವರಿ ಯೋಜನೆಯ ಟಕ್ಕಳಕಿ ವೃತ್ತದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.
2025-26ನೇ ಸಾಲಿನ ಕೃಷ್ಣಾ ಮೇಲ್ದಂಡೆ ಯೋಜನೆಯ ನೀರಾವರಿ ಸಲಹಾ ಸಮಿತಿ ಸಭೆಯ ನಿರ್ಣಯದಂತೆ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ಮುಳವಾಡ ಏತ ನೀರಾವರಿ ವೃತ್ತ ಟಕ್ಕಳಕಿ ಅಡಿಯಲ್ಲಿ ಬರುವ ಹಂತ-2 ರ ಪೂರ್ವ ಮತ್ತು ಪಶ್ಚಿಮ ಕಾಲುವೆ, ಸೊನ್ನ ಏತ ನೀರಾವರಿ, ರೊಳ್ಳಿ ಮನ್ನೀಕೇರಿ ಏತ ನೀರಾವರಿ ಮತ್ತು ತೆಗ್ಗಿ ಸಿದ್ದಾಪೂರ ಏತ ನೀರಾವರಿ ಯೋಜನೆಗಳ ಕಾಲುವೆ ಜಾಲಕ್ಕೆ ಹಿಂಗಾರು ಹಂಗಾಮಿಗೆ ದಿನಾಂಕ: 02-12-2025 ರಿಂದ 03-04-2026 ರವರೆಗೆ 14 ದಿನ ಚಾಲೂ ಹಾಗೂ 10 ದಿನ ಬಂದ ಅನುಸರಿಸಿ ಒಟ್ಟು 123 ದಿನಗಳವರೆಗೆ ನೀರು ಪೂರೈಸಲು ತೀರ್ಮಾನಿಸಲಾಗಿತ್ತು.
ಈಗ ನೀರಿನ ಲಭ್ಯತೆಯ ಅನುಸಾರ 2025-26ನೇ ಸಾಲಿನ ಹಿಂಗಾರು ಹಂಗಾಮಿಗೆ ನೀರು ಪೂರೈಸುವ ಅವಧಿಯನ್ನು ಏ. 1 ರಿಂದ ಏಪ್ರಿಲ್ 7 ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.
ಯೋಜನಾ ವ್ಯಾಪ್ತಿಯ ಕಾಲುವೆಗಳಲ್ಲಿ ಬೆಳೆದು ನಿಂತಿರುವ ಲಘು ನೀರಾವರಿ ಬೆಳೆಗಳನ್ನು ಸಂರಕ್ಷಿಸಲು ಅವಶ್ಯವಿದ್ದಲ್ಲಿ ಮಾತ್ರ ನೀರನ್ನು ಮಿತವಾಗಿ ಬಳಸಬೇಕು ಎಂದು ಪ್ರಕಟಣೆಯಲ್ಲಿ ರೈತರಿಗೆ ಮನವಿ ಮಾಡಿದ್ದಾರೆ.
Editor
Rudrappa B Asangi
Editor
Managing Editor
Chetan Asangi
Managing Editor


